ಡಾ. ಬಾಬು ಜಗಜೀವನರಾಂ ರವರ 38 ನೇ ಪುಣ್ಯಸ್ಮರಣೆ
ಕಲಬುರಗಿ:ಜು.6: ಮಾಜಿ ಉಪ ಪ್ರಧಾನಿ ಮತ್ತು ಹಸಿರು ಕ್ರಾಂತಿಯ ಹರಿಕಾರರಾಗಿರುವ ಡಾ.ಬಾಬು ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿ ನಗರದ ಟೌನ್ ಹಾಲ್ ಅವರಣದಲ್ಲಿರುವ ಡಾ.ಬಾಬು ಜಗಜೀವನರಾಂ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮುನಾವರ ದೌಲಾ, ಕಲಬುರಗಿ ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತರ ಶಿವಣಗೌಡ ಪಾಟೀಲ, ಸೇರಿದಂತೆ ಅಧಿಕಾರಿಗಳು ಸಮಾಜ ಕಲ್ಯಾಣ ಸಿಬ್ಬಂದಿ ವರ್ಗದವರು ಇದ್ದರು.