ರಾಷ್ಟ್ರಕ್ಕೆ ಡಾ.ಬಾಬು ಜಗಜೀವನರಾಮ್ ಕೊಡುಗೆ ಅನನ್ಯ
ಕಲಬುರಗಿ:ಜು.6: ಡಾ.ಬಾಬು ಜಗಜೀವನರಾಮ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ಸ್ವಾತಂತ್ರ್ಯನಂತರ ಸಂವಿಧಾನ ರಚನಾ ಸಭೆಯ ಸದಸ್ಯರಾಗಿ, ಉಪ ಪ್ರಧಾನಿಯಾಗಿ, ವಿವಿಧ ಖಾತೆಯ ಸಚಿವರಾಗಿ, ರೈತರ, ಶೋಷಿತರ,ಬಡವರಿಗಾಗಿ ತಮ್ಮ ಅಮೂಲ್ಯವಾದ ಸೇವೆಯನ್ನು ಸಲ್ಲಿಸುವ ಮೂಲಕ ದೇಶ ಕಂಡ ಅಪ್ರತಿಮ ಜನನಾಯಕರಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಪ್ರಾಚಾರ್ಯರಾದ ರವೀಂದ್ರಮಾರ ಸಿ.ಬಟಗೇರಿ ಹೇಳಿದರು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಶನಿವಾರ ಜರುಗಿದ ‘ಡಾ.ಬಾಬು ಜಗಜೀವನರಾಂ ಅವರ38ನೇ ಸ್ಮರಣೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಅವರುಮಾತನಾಡುತ್ತಿದ್ದರು.
ರಸಾಯನಶಾಸ್ತ್ರ ಉಪನ್ಯಾಸಕ ಮಲ್ಲಿಕಾರ್ಜುನ ದೊಡ್ಡಮನಿ ಮಾತನಾಡಿ, ಜಗಜೀವನರಾಮ್ ಅವರು ಮೂಲತಃ ಕೃಷಿ ಕುಟುಂಬದವರಾಗಿದ್ದರಿಂದ, ಕೃಷಿಕರ, ಕಾರ್ಮಿಕರ ಪರಿಸ್ಥಿತಿಯನ್ನು ಬಾಲ್ಯದಿಂದಲೇ ಗಮನಿಸಿ, ಮುಂದೆ ಜೀವನದಲ್ಲಿ ರೈತಪರ, ಕಾರ್ಮಿಕರಪರ ಹೋರಾಟ ಮಾಡಲು ಸ್ಪೂರ್ತಿಯಾಯಿತು. ನಿರಂತರವಾದ ಹೋರಾಟದ ಮೂಲಕ ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಟ್ಟರು. ಸ್ವಾತಂತ್ರ್ಯ ಹೋರಾಟಗಾರರಾಗಿ, ಶೋಷಿತರ, ರೈತರ, ಕಾರ್ಮಿಕರ ಆಶಾಕಿರಣವಾಗಿ ರಾಷ್ಟ್ರಕ್ಕೆಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಎಚ್.ಬಿ.ಪಾಟೀಲ, ಪ್ರಕಾಶ ಪಾಟೀಲ, ಉಮಾದೇವಿ ಮಾಲಿಪಾಟೀಲ, ಸುನಂದಾ, ಮಹಮ್ಮದ್ ಅಬ್ದುಲ್ ಸಮದ್, ದ್ವಿ.ದ.ಸ ರಾಮಚಂದ್ರ ಚವ್ಹಾಣ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.