ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ: ನೂರು ಕೆ.ಜಿ. ಪ್ಲಾಸ್ಟಿಕ್ ವಶ
ಮಧುಗಿರಿ, ಜು. ೬- ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿ ಸುರೇಶ್ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪ್ಲಾಸ್ಟಿಕ್ ರೈಡ್ ಮಾಡಲಾಗಿದ್ದು ನೂರು ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ಜು. ೧ ರಿಂದ ಪಟ್ಟಣದ ಅಂಗಡಿಗಳಲ್ಲಿ ಏಕರೂಪದ ಪ್ಲಾಸ್ಟಿಕ್ ನಿಷೇದಿಸಲಾಗಿದೆ ಎಂದು ಈ ಕಳೆದ ವಾರ ವರ್ತಕರ ಸಭೆ ನಡೆಸಿ ತಿಳುವಳಿಕೆ ನೀಡಲಾಗಿತ್ತು. ಆದರೂ ಕೆಲ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಸುರೇಶ್ ಸ್ವತಃ ತೆರಳಿ ಅಂಗಡಿಗಳಲ್ಲಿ ದಾಸ್ತಾನು ಮಾಡಲಾಗಿದ್ದು ೧೦೦ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ೩೫೦೦ ಸಾವಿರ ರೂ. ದಂಡ ವಿಧಿಸಲಾಗಿದೆ.
ಜು. ೧ ರಿಂದ ಏಕರೂಪದ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಕಳೆದ ವಾರವೇ ವರ್ತಕರ ಸಭೆಯಲ್ಲಿ ತಿಳುವಳಿಕೆ ನೀಡಲಾಗಿತ್ತು. ಆದರೂ ಪ್ಲಾಸ್ಟಿಕ್ ಮಾರಾಟ ನಿಯಂತ್ರಣಕ್ಕೆ ಬಂದಿರಲಿಲ್ಲ. ಹಾಗಾಗಿ ಮೊದಲ ಹಂತದಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಕ್ಕೆ ಪಡೆದು ದಂಡ ವಿಧಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾದರೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಹೇಳಿದ್ದಾರೆ.