ವಿದ್ಯಾರ್ಥಿಗಳಿಂದ ಕಲೆ ಸಂಸ್ಕೃತಿಗೆ ಹೆಚ್ಚು ಒತ್ತು
ಬೇಲೂರು.ಜು.೬- ಸರ್ಕಾರಿ ಶಾಲೆಯಲ್ಲಿ ಓದಿದಂತ ವಿದ್ಯಾರ್ಥಿಗಳು ಕಲೆ ಸಂಸ್ಕೃತಿಗೆ ಹೆಚ್ಚು ಒತ್ತು ನೀಡುತ್ತಾರೆ ಎಂದು ಲಯನ್ಸ್ ಸೇವಾ ಸಂಸ್ಥೆ ಅಧ್ಯಕ್ಷ ಡಾಕ್ಟರ್ ಚಂದ್ರಮೌಳಿ ಹೇಳಿದರು.
ಪಟ್ಟಣದ ಸಮೀಪ ಎನ್ ನಿಡಗೋಡು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ,ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ಶಿಬಿರವನ್ನು ಗಿಡ ನೆಡುವ ಮೂಲಕ ನೆರವೇರಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವರೇ ಹೆಚ್ಚು ಆದರೆ ಇಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಇಂಗ್ಲೀಷ್ ಕಲಿಕೆಯಲ್ಲಿ ಖಾಸಗಿ ಶಾಲೆಗಳನ್ನ ಮೀರಿಸುವ ಜ್ಞಾನದ ಭಂಡಾರ ಹೊಂದಿದ್ದಾರೆ.
ಇಲ್ಲಿಯ ಶಿಕ್ಷಕರ ಆಶಾಕಿರಣ್ ಅವರು ನೀಡಿರುವ ಕಂಪ್ಯೂಟರ್ ಕಲಿಕೆಗೆ ಬೇಕಾಗಿದ್ದ ಶಿಕ್ಷಕರನ್ನು ನಮ್ಮ ಲಯನ್ಸ್ ಸೇವಾ ಸಂಸ್ಥೆಯಿಂದ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವನ್ನು ನೀಡುತ್ತಿದ್ದೇವೆ.ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಕ್ಷೀಣಿಸುತ್ತಿದ್ದು ಖಾಸಗಿ ಶಾಲೆಗಲಿಗ ಸೆಡ್ಡುಹೊಡೆಯುವ ರೀತಿಯಲ್ಲಿ ಸರ್ಕಾರಿ ಶಾಲೆ ಯಲ್ಲಿ ಓದಿದಂತ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನು ಕಲಿತಿರುತ್ತಾರೆ.ಪ್ರತಿ ವಿದ್ಯಾರ್ಥಿಗಳಿಗೂ ಆರೋಗ್ಯ ತಪಾಸಣೆ ಅತಿಮುಖ್ಯ,ಅದಕ್ಕಾಗಿ ಪ್ರತಿ ಶಾಲಾ ಕಾಲೇಜುಗಳಲ್ಲಿ ವಾರಕ್ಕೊಮ್ಮೆ ಆರೋಗ್ಯ ತಪಾಸಣಾ ಶಿಬಿರ ಮಾಡುತ್ತಿದ್ದೇವೆ ಎಂದರು.
ನಂತರ ವಲಯ ಅಧ್ಯಕ್ಷ ಅಬ್ದುಲ್ ಲತೀಫ್ ಮಾತನಾಡಿ ಪ್ರತೀ ವರ್ಷ ಸಹ ನಮ್ಮ ಲಯನ್ಸ್ ಸೇವಾ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ
ಈ ವರ್ಷ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಆದರ್ಶ ಲ್ಯಾಬ್ ವತಿಯಿಂದ ಕಣ್ಣಿನ ಪರೀಕ್ಷೆ ಮಾಡುವ ಮೂಲಕ ಅವರಿಗೆ ತೊಂದರೆ ಇದ್ದರೆ ನಮ್ಮ ಸಂಸ್ಥೆಯ ಕಡೆಯಿಂದ ಉಚಿತ ಚಿಕಿತ್ಸೆ ನೀಡಲಾಗುವುದು.ವಿದ್ಯಾರ್ಥಿಗಳ ಪರಿಸರದ ಜಾಗೃತಿಯನ್ನು ಚಿಕ್ಕಮಕ್ಕಳಿಂದಲೆ ಅರಿವು ನೀಡುವ ಕೆಲಸ ಮಾಡಲಾಗುವುದು ಎಂದರು.
ನಂತರ ಮುಖ್ಯೋಪಧ್ಯಾಯ ಜಗದೀಶ್ ಮಾತನಾಡಿ, ಲಯನ್ಸ್ ಸಂಸ್ಥೆ ನಮ್ಮ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ಕಂಪ್ಯೋಟರ್ ತರಭೇತಿ ಯನ್ನು ನೀಡಲು ಮುಂದಾಗಿರುವುದು ಶ್ಲಾಘನೀಯ .ನಮ್ಮ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಜ್ಞಾನದ ಬಗ್ಗ ಅರಿವು ಮೂಡಿಸುವ ಉದ್ದೇಶದಿಂದ ೧ ರಿಂದ ೫ ರವರೆಗೆ ಇಂಗ್ಲೀಷ್ ಶಿಕ್ಷಣ ನೀಡುತ್ತಿದ್ದೇವೆ.ಉತ್ತಮ ಭೋದಕರಿಂಸಲೂ ಸಹ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲಬ್ಯಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉತ್ತಮ ನಾಗರೀಕರನ್ನಾಗಿ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಪ್ರಶಾಂತ್,ಸುಮಂತ್,ಸಂತೋಷ್,ಪೂವಯ್ಯ,ಕಣ್ಣಿನ ಆಸ್ಪತ್ರೆ ಆದರ್ಶ,ರವಿಕುಮಾರ್, ಶಿಕ್ಷಕರಾದ ಆಶಾ,ಪ್ರತಿಮ,ಹಾಜರಿದ್ದರು.