ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಲಿ: ಶಾಸಕರಾದ ಹೆಚ್.ಆರ್.ಗವಿಯಪ್ಪ ಸಲಹೆ
ಹೊಸಪೇಟೆ (ವಿಜಯನಗರ) ಜುಲೈ 05: ಪರಿಸರ ಎನ್ನುವುದು ನಮಗೆ ಜೀವನವಿದ್ದಂತೆ, ಸುಂದರವಾದ ಪರಿಸರವನ್ನು ನಾವು ನಿರ್ಮಾಣ ಮಾಡಬೇಕಾಗಿದೆ. ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗÀಬೇಕು ಎಂದು ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.
ಹೊಸಪೇಟೆಯ ವಿಜಯನಗರ ಪ್ರಾದೇಶಿಕ ಅರಣ್ಯ ವಿಭಾಗ, ಪ್ರಾದೇಶಿಕ ಅರಣ್ಯ ವಲಯ, ಸಾಮಾಜಿಕ ಅರಣ್ಯ ವಲಯ ಇವರ ಸಹಯೋಗದಲ್ಲಿ ಜುಲೈ 4ರಂದು ಜಂಬುನಾಥನಹಳ್ಳಿ ಗುಡ್ಡದ ಹತ್ತಿರ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಅವರು ಮಾತನಾಡಿದರು.
ಪರಿಸರವನ್ನು ನಾವು ಹಾಳುಮಾಡದೇ ಅದನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರದಿಂದ ನಮಗೆ ಉತ್ತಮವಾದ ಆಮ್ಲಜನಕ ದೊರೆಯುತ್ತದೆ. ಪರಿಸರ ಉಳಿದರೆ ಮಾತ್ರ ನಾವು ಬದುಕಲು ಸಾಧ್ಯ. ಎಲ್ಲರೂ ಒಗ್ಗಟ್ಟಾಗಿ ಉತ್ತಮವಾದ ಪರಿಸರದ ವಾತಾವರಣವನ್ನು ನಿರ್ಮಿಸಬೇಕು. ವರ್ಷಕ್ಕೆ 5 ಗಿಡಗಳನ್ನಾದರು ನೆಡಬೇಕು ಎಂದು ಸಲಹೆ ನೀಡಿದರು.
ಬಳ್ಳಾರಿಯ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಾಣಾಧಿಕಾರಿ ರವಿ.ಜೆ ಅವರು ಪ್ರ‍್ರಾಸ್ತಾವಿಕ ಮಾತನಾಡಿ, ತಾಯಿ ಹೆಸರಿನಲ್ಲಿ ಇಂದು ನಾವು ಗಿಡಗಳನ್ನು ನೆಟ್ಟಿದ್ದೇವೆ. ಸರ್ವಕಾಲಕ್ಕೂ ತಾಯಿಯೇ ಶ್ರೇಷ್ಠ. ತಾಯಿಯ ಹೆಸರಲ್ಲಿ ಗಿಡ ನೆಟ್ಟರೆ ಆ ಮರಗಳು ಸಮೃದ್ದಿಯಾಗಿ ಬೆಳೆಯುತ್ತವೆ. ನಮ್ಮಲ್ಲಿ ವಿವಿಧ ಜಾತಿಯ ಅನೇಕ ಮರಗಳಿವೆ. ಅವುಗಳನ್ನು ನಾವು ಕಾಪಾಡಬೇಕಾಗಿದೆ. ಹೆಚ್ಚು ಹೆಚ್ಚು ಮರಗಳಿದ್ದರೆ ಪರಿಸರ ಸುಂದರವಾಗಿ ಕಾಣುತ್ತದೆ ಹಾಗೂ ಉತ್ತಮವಾದ ಗಾಳಿಯು ನಮಗೆ ಸಿಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಜೆಷ್ವಂತ್ ಹಾಗೂ ಗಾಯಿತ್ರಿ ತಮ್ಮ ಅನಿಸಿಕೆಗಳನ್ನು ಹೇಳಿದರು. ಸಮಾರಂಭದಲ್ಲಿ ಪರಿಸರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಅನೇಕ ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಅಧಿಕಾರಿಗಳಿಗೆ ಕೇಳಿ ಹೆಚ್ಚಿನ ಮಾಹಿತಿ ಪಡೆದುಕೊಂಡರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅರ್ಸಲನ್, ಸಹಾಯಕ ಆಯುಕ್ತರಾದ ಮಹಮ್ಮದ್ ಅಲಿ ಅಕ್ರಮ ಷಾಹ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ, ನಗರಸಭೆ ಆಯುಕ್ತರಾದ ಈರಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚನ್ನಬಸಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಾಳಾದ ರಾಜೇಶ್ ನಾಯ್ಕ್, ಹೊಸಪೇಟೆ ವಲಯ ಅರಣ್ಯಾಧಿಕಾರಿ ಭರತ್‌ರಾಜ್, ಸಾಮಾಜಿಕ ಅರಣ್ಯಾಧಿಕಾರಿ ನಾಗರಾಜ್.ಕೆ, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಅಂಬೇಡ್ಕರ್ ಶಾಲೆ ಮತ್ತು ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಇದ್ದರು.