ಧರ್ಮಣ್ಣ ದೊಡ್ಮನಿ ನಿಧನಕ್ಕೆ ಅಷ್ಠಗಿ ಸಂತಾಪ
ಕಲಬುರಗಿ:ಜು.4: ಬಿಜೆಪಿಯ ಹಿರಿಯ ಮುಖಂಡ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಧರ್ಮಣ್ಣ ದೊಡ್ಮನಿ ಅವರ ನಿಧನಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ