ಪ್ಲಾಸ್ಟಿಕ್‍ಗೆ ಪರ್ಯಾಯ ಬಳಕೆ ಅಗತ್ಯ
ಕಲಬುರಗಿ:ಜು.4: ಪ್ಲಾಸ್ಟಿಕ್ ಮಣ್ಣಿನಲ್ಲಿ ಕೊಳೆಯದಿರುವದರಿಂದ ಮಣ್ಣು ಸೇರಿದಂತೆ ಪರಿಸರ ಮಾಲಿನ್ಯ ಉಂಟುಮಾಡುತ್ತದೆ. ಇದು ಜೀವಿಗಳ ಮೇಲೆ ನೇರವಾದ ದುಷ್ಪರಿಣಾಮ ಉಂಟುಮಾಡುವ ಮೂಲಕ ಪರಿಸರಕ್ಕೆ ಮಾರಕವಾಗಿದೆ. ಆದ್ದರಿಂದ ಪ್ಲಾಸಿಕ್ ಬಳಕೆಯನ್ನು ನಿಲ್ಲಿಸಿ, ಬಟ್ಟೆ, ಸೆಣಬು ಚೀಲಗಳು ಸೇರಿದಂತೆ ಮುಂತಾದ ಪರ್ಯಾಯ ವಸ್ತುಗಳನ್ನು ಬಳಕೆ ಮಾಡುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಜೆ.ಆರ್ ನಗರದಲ್ಲಿರುವ ‘ಶ್ರೀ ಬಸವ ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ಮಾತನಾಡಿ, ಪ್ಲಾಸ್ಟಿಕ್ ಸೇವೆನೆ ಮಾಡಿ ಅನೇಕ ಪ್ರಾಣಿ-ಪಕ್ಷಿಗಳು ಅಸುನೀಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಪ್ಲಾಸ್ಟಿಕ್ ತ್ಯಜಿಸಿ, ಜೀವ ಉಳಿಸಿ, ಪರಿಸರ ಕಾಪಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಅಸ್ಲಾಂ ಶೇಖ್, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಪ್ರಿಯಾಂಕಾ ಉಜಳಂಬಿ, ನಿಲೊಫರ್ ಶೇಖ್, ಐಶ್ವರ್ಯ ಬಿರಾದಾರ, ಪೂಜಾ ಜಮಾದಾರ, ಪೂಜಾ ಹೂಗಾರ ಹಾಗೂ ವಿದ್ಯಾರ್ಥಿಗಳು ಇದ್ದರು.