ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಪ್ರವಾಸ
ಕಲಬುರಗಿ:ಜು.4:ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್. ರವಿಕುಮಾರ್ ಅವರು ಬೆಂಗಳೂರಿನಿಂದ ವಿಮಾನ ಮೂಲಕ ಜುಲೈ 5 ರಂದು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ಕಚೇರಿಯ ಪರಿವೀಕ್ಷಣೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಅಂದು ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಯಾದಗಿರಿಗೆ ಪ್ರಯಾಣಿಸುವರು.