ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಕಲಬುರಗಿ,ಜು.4-ಕಳಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ತಾಲ್ಲೂಕು ಪಂಚಾಯತ ಆಡಳಿತಾಧಿಕಾರಿಗಳಾದ ಗಂಗಾಧರ ಎಂ, ಕಾರ್ಯನಿರ್ವಾಹಕ ಅಧಿಕಾರಿ ಸೈಯದ ಪಟೇಲ, ತಹಸೀಲ್ದಾರರಾದ ನಾಗಮ್ಮ ಕಟ್ಟಿಮನಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿ.ಡಿ.ಓ ರವರು ಮತ್ತು ತಾಲ್ಲೂಕ ಪಂಚಾಯತ ಕಛೇರಿ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.
ಶಾಸಕರು, ಇಲಾಖಾ ಮಟ್ಟದ ಅಧಿಕಾರಿಗಳು ಕಡ್ಡಯವಾಗಿ ತಮ್ಮ ಅಧೀನ ಸಿಬ್ಬಂದಿಗಳನ್ನು ಕಳುಹಿಸದೇ ಖುದ್ದಾಗಿ ಹಾಜರಿರಲು ಕಟ್ಟುನಿಟ್ಟಾಗಿ ಸೂಚಿಸಿದರು. ಕೃಷಿ ಇಲಾಖೆ ಪಿಆರ್‍ಇಡಿ, ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಅರಣ್ಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೈಗಾರಿಕೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಪಿಎಂಐಎಸ್‍ವೈ, ಜೆಸ್ಕಾಂ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ, ಪಶು ಸಂಗೋಪನಾ ಇಲಾಖೆ, ವಾಲ್ಮೀಕಿ ಮತ್ತು ಅಂಬೇಡ್ಕರ ಅಭಿವೃದ್ಧಿ ನಿಗಮ ಸೇರಿದಂತೆ ಮುಂತಾದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಪುಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳು ಪ್ರಗತಿ ಸಾಧಿಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಮುಂದಿನ ಪ್ರಗತಿ ಪರೀಶಿಲನಾ ಸಭೆಯಲ್ಲಿ ಒಂದು ವೇಳೆ ಪ್ರಗತಿ ಸಾಧಿಸದೇ ಇದ್ದಲ್ಲಿ ಅವರ ಮೇಲೆ ಸೂಕ್ತ ಕ್ರಮಕ್ಕಾಗಿ ಖುದ್ದಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಶಾಸಕರು ಖಡಕ್ ಎಚ್ಚರಿಕೆ ನೀಡಿದರು.