ಬೈಂದೂರು ಮಾಜಿ ಶಾಸಕ, ಬಿಜೆಪಿ ಮುಖಂಡ ಲಕ್ಷ್ಮೀ ನಾರಾಯಣ ನಿಧನ
ಕುಂದಾಪುರ : ಬೈಂದೂರಿನ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡರಾದ ಕೆ. ಲಕ್ಷ್ಮೀ ನಾರಾಯಣ (೮೫) ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ, ಇವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಾಗಿದ್ದರು. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.