ಮಾದಕ ವಸ್ತು ವಿರೋಧ ದಿನಾಚರಣೆ  ಜಾಗೃತಿ ಜಾಥಾ
ಸಂಜೆವಾಣಿ ವಾರ್ತೆ
ಸಂಡೂರು:ಜು:4:: ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಈ ಮಾದಕ ವಸ್ತುಗಳಿಂದ ದೂರವಿರ ಅತಿ ಅಗತ್ಯವಾಗಿದೆ ಎಂದು ತಹಶೀಲ್ದಾರ್ ಅನಿಲ್ ಕುಮಾರ ತಿಳಿಸಿದರು
ಅವರು ಪಟ್ಟಣದ ಸರ್ಕಾರಿ ಅಸ್ಪತ್ರೆಯ ವತಿಯಿಂದ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತಿ ಬಳ್ಳಾರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಂಡೂರು ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆ  ಜಾಗೃತಿ ಜಾಥಾ ಕಾರ್ಯಕ್ರಮವನ್ನು ವಾರಗಳ ಕಾಲ ಪಟ್ಟಣದಲ್ಲಿ ನಡೆಸಲಾಯಿತು ಈ ಸಂದರ್ಭದಲ್ಲಿ ಅವರು ಮಾತನಾಡಿ ದೇಶದ ಸಂಪತ್ತಾಗಬೇಕಾದ ಯುವಕರು ಇಂತಹ ದುಶ್ಚಟಗಳ ದಾಸರಾಗುವ ಮೂಲಕ ಮನೆಗೆ ಹೊರೆಯಾಗಿ, ದೇಶಕ್ಕೆ ಅಪಾಯಕಾರಿಯಾಗಿ ಪರಿಣಮಿಸುತ್ತಿರುವುದು ಅತಂಕದ ಸಂಗತಿಯಾಗಿದೆ ಅದನ್ನು ತಡೆಯಲು ಪ್ರತಿಯೊಬ್ಬರೂ ಸಹ ಪ್ರಯತ್ನಿಸಬೇಕು ಇಲ್ಲವಾದಲ್ಲಿ ಅಪಾಯ ತಪ್ಪಿದ್ದಲ್ಲ ಎಂದರು.
ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಭರತ್ ಕುಮಾರ್ ಟಿ ಇವರು ಈ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿ ಮಾದಕ ವಸ್ತುಗಳು ವಿವಿಧ ರೂಪದಲ್ಲಿ ದೊರೆಯುತ್ತವೆ, ಇದರ ಸೇವನೆ ಹಾಗೂ ಸಾಗಾಣಿಕೆ ಮಾಡುವುದು ಅಪರಾದ ಈ ಅಪರಾದದಲ್ಲಿ ಪಾಲ್ಗೊಂಡವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು ಆಸ್ಪತ್ರೆಗಳ ಸಿಬ್ಬಂದಿ ಮತ್ತು ತಾಲೂಕ ಆರೋಗ್ಯ ಅಧಿಕಾರಿಗಳ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಈ ಜಾಥಾ ಕಾರ್ಯಕ್ರಮವನ್ನು ನಡೆಸಿದರು.
ಸಾರ್ವಜನಿಕ ಆಸ್ಪತ್ರೆಗಳ ಸಿಬ್ಬಂದಿ ಮತ್ತು ತಾಲೂಕ ಆರೋಗ್ಯ ಅಧಿಕಾರಿಗಳ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಈ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಬಂಡೆಗೌಡರ್ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಇವರು ನಿರ್ವಹಿಸಿದರು ಮತ್ತು ವಿಜಯಲಕ್ಷ್ಮಿ, ನೀಲಮ್ಮ , ಬಶೀರ್ ಸಾಬ್, ಕೊಟ್ರೇಶ್, ಕುಮಾರ್, ಮರಿಗೌಡ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು