ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸ್ವಾಗತ
ಸಂಜೆವಾಣಿ ವಾರ್ತೆ
ಹನೂರು.ಜು.4 :- ತಾಲೂಕಿನ ಮಾರ್ಟಳ್ಳಿ ಸೆಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಶಾಲೆಗೆ ಬಂದ ಹೊಸ ವಿದ್ಯಾರ್ಥಿಗಳಿಗೆ ಹೂ ಗುಚ್ಛವನ್ನು ನೀಡಿ ವಿಶೇಷವಾಗಿ ಸ್ವಾಗತಿಸಲಾಯಿತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಶಿಕ್ಷಕರ ಸ್ವಾಗತಕ್ಕೆ ಸಂತೋಷ ವ್ಯಕ್ತಪಡಿಸಿ ಸಂಭ್ರಮಿಸಿದರು.
ಶಾಲೆಯ ಮುಂಭಾಗ ಹಸಿರು ತೋರಣಗಳನ್ನು ಕಟ್ಟಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂ ಗುಚ್ಛ ನೀಡಿ ಸಿಹಿ ಹಂಚಿ ,ಬ್ಯಾಂಡ್ಸೆಟ್ ಸದ್ದಿನೊಂದಿಗೆ ವಿಶೇಷವಾಗಿ ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ ಶಿಕ್ಷಕರು ಶಾಲೆಯ ಆರಂಭೋತ್ಸವದ ದಿನದ ಕ್ಷಣಗಳನ್ನು ಮಕ್ಕಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾರ ಸುನಿಲ್ ದೈಹಿಕ ಶಿಕ್ಷಕರಾದ ಆಗಸ್ಟಿನ್ ಸಿಸ್ಟರ್ ಜೋತಿ ಶಿಕ್ಷಕ ಅಲೆಕ್ಸ್ ಸಹ ಶಿಕ್ಷಕರು ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.