ನೀರಿನ ಮೂಲಗಳನ್ನು ಪರೀಕ್ಷಿಸಿ ಫಲಿತಾಂಶವನ್ನು ಕ್ರಮ ಬದ್ಧವಾಗಿ ನಮೂದಿಸಿ: ಪಿ.ಲಕ್ಷ್ಮೀ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.04- ನೀರಿನ ಮೂಲಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪರೀಕ್ಷಿಸಿ, ಫಲಿತಾಂಶವನ್ನು ಪ್ರತ್ಯೇಕ ಪುಸ್ತಕದಲ್ಲಿ ಕ್ರಮಬದ್ಧವಾಗಿ ನಮೂದಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ ಫೀಲ್ಡ್‍ಟೆಸ್ಟ್‍ಕಿಟ್(ಎಫ್.ಟಿ.ಕೆ) ಮತ್ತು ಹೆಚ್2ಎಸ್ ವಾಯೀಲ್ಸ್ ಉಪಯೋಗಿಸಿ ನೀರಿನ ಪರೀಕ್ಷೆಗಳನ್ನು ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದÀ ಒಂದು ದಿನದತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಿಂದ ಕೂಡಿದ್ದು, ಜನರಿಗೆ ನೀರನ್ನು ಕುದಿಸಿ ಆರಿಸಿ ಕುಡಿಯುವ ಅಭ್ಯಾಸದ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಮಕ್ಕಳ ಮೂಲಕ ಜನರಿಗೆ ಕುಡಿಯುವ ನೀರನ್ನು ಕುದಿಸಿ ಆರಿಸಿ ಶುದ್ಧವಾದ ನೀರನ್ನು ಕುಡಿಯುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.
ಶುದ್ದ ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನೀರಿನ ಸ್ಥಾವರ, ತೊಂಬೆಗಳನ್ನು ಶುಚಿಗೊಳಿಸಬೇಕು. ನೀರಿನ ಮೂಲಗಳನ್ನು ಪರೀಕ್ಷಿಸಿ ಫಲಿತಾಂಶವನ್ನು ಪ್ರತ್ಯೇಕ ಪುಸ್ತಕದಲ್ಲಿ ಹಾಗೂ ನೀರನ್ನು ಪರೀಕ್ಷಿಸಿದ ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕು. ಪ್ರತಿಯೊಬ್ಬರು ಶೌಚಾಲಯವನ್ನು ಬಳಸುವಂತೆ ಪ್ರೇರೆಪಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮೀ ಅವರು ತಿಳಿಸಿದರು.
ಹನೂರು ಮತ್ತು ಯಳಂದರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ÀÀ ಅವರು ಮಾತನಾಡಿ ನೀರಿನ ಸ್ಥಾವರಗಳು ಹಾಗೂ ನೀರಿನ ಸರಬರಾಜು ಪೈಪ್‍ಲೈನ್ ಸೋರಿಕೆ ಆಗುವುದನ್ನು ತಡೆಗಟ್ಟಬೇಕು. ವಾರದಲ್ಲಿ ಒಂದು ದಿನ ನೀರು ಘಂಟಿಗಳನ್ನ ಒಳಗೊಂಡ ಸಭೆ ನಡೆಸಿ ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆಯಬೇಕಾಗಿದೆ ಎಂದರು.
ಕೊಳ್ಳೇಗಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಅವರು ಮಾತನಾಡಿ ಸ್ಥಾವರಗಳಲ್ಲಿ ಹೆಚ್ಚುವರಿ ನೀರು ತುಂಬಿದಾಗ ತಕ್ಷಣ ನಿಲ್ಲಿಸುವಂತಹ ನೂತನ ತಂತ್ರಜ್ಞಾನ ಈಗಾಗಲೇ ಜಾರಿಗೆ ಬಂದಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನೀರು ಅನಾವಶ್ಯಕವಾಗಿ ಪೆÇೀಲಾಗುವುದನ್ನು ತಡೆಗಟ್ಟಬಹುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಇಲಾಖೆಯಿಂದ ವಿತರಿಸಿರುವ ಫೀಲ್ಡ್‍ಟೆಸ್ಟ್‍ಕಿಟ್ (ಎಫ್.ಟಿ.ಕೆ) ಬಳಕೆ ಮಾಡಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ನೀರಿನ ಮೂಲಗಳನ್ನು ಪರೀಕ್ಷಿಸಿ ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಕಳುಹಿಸಿಕೊಡಬೇಕು ಎಂದÀರು
ಜೆ.ಜೆ.ಎಂ ಜಿಲ್ಲಾಯೋಜನಾ ವ್ಯವಸ್ಥಾಪಕರಾದ ಆಶಾ ರಮೇಶ್ ಅವರು ಮಾತನಾಡಿ ಈಗಾಗಲೇ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಫೀಲ್ಡ್‍ಟೆಸ್ಟ್‍ಕಿಟ್ ನೀಡಲಾಗಿದ್ದು, ಈ ಸಂಬಂಧ ಪಂಚಾಯಿತಿ ಹಂತದಲ್ಲಿ ತರಬೇತಿ ನೀಡಲಾಗಿದೆ. ಅಲ್ಲದೆ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ಪೆÇೀಸ್ಟರ್, ಹ್ಯಾಂಡ್ ಬುಕ್‍ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪೆÇೀಸ್ಟರ್‍ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಬೇಕು. ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿ ಪುನರ್‍ರಚನೆ ಮಾಡಬೇಕು. ಕಾಲಕಾಲಕ್ಕೆ ಫೀಲ್ಡ್‍ಟೆಸ್ಟ್‍ಕಿಟ್ ಬಳಸಿ ಎಲ್ಲಾ ನೀರಿನ ಮೂಲಗಳನ್ನು ಪರೀಕ್ಷೆ ಮಾಡಿದಾಖಲೆ ನಿರ್ವಹಿಸಬೇಕೆಂದು ತಿಳಿಸಿದರು.
ಚಾಮರಾಜನಗರ ತಾಲೂಕು ಪ್ರಯೋಗಾಲಯದ ಹಿರಿಯ ವಿಶ್ಲೇಷಕರಾದ ಕೌಶಿಕ್, ಕೊಳ್ಳೇಗಾಲ ತಾಲ್ಲೂಕು ಪ್ರಯೋಗಾಲಯದ ವಿಶ್ಲೇಷಕರಾದ ಅನಿಲ್‍ಕುಮಾರ್, ಕಿರಿಯ ವಿಶ್ಲೇಷಕರಾದ ರವಿಕುಮಾರ್ ಫೀಲ್ಡ್‍ಟೆಸ್ಟ್‍ಕಿಟ್ ಬಳಸಿ ನೀರಿನ ಪರೀಕ್ಷೆ ವಿಧಾನಗಳು ಹಾಗೂ ಪರೀಕ್ಷೆ ಬಳಿಕ ಹಮ್ಮಿಕೊಳ್ಳಬೇಕಾದ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಎಲ್ಲಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.