ಹಳಕಟ್ಟಿ ಕೊಡುಗೆ ಅನನ್ಯ
ಕೋಲಾರ.ಜು,೪- ವಚನ ಸಾಹಿತ್ಯದ ಪಿತಾಮಹಾ ಡಾ.ಫ.ಗು.ಹಳಕಟ್ಟಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಅನನ್ಯ, ಅವರ ತತ್ವ,ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಆಳವಡಿಸಿ ಕೊಳ್ಳುವ ಮೂಲಕ ಕನ್ನಡ ವಚನ ಸಾಹಿತ್ಯವನ್ನು ಮುಂದಿನ ಪೀಳಿಗೆಗಳಿಗೂ ಅರಿವು ಮೋಡಿಸ ಬೇಕಾಗಿರುವುದು ನಮ್ಮೆಲ್ಲಾರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ತಿಳಿಸಿದರು,
ನಗರದ ಟಿ.ಚೆನ್ನಯ್ಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಚನ ಸಾಹಿತ್ಯದ ಪಿತಾಮಹಾ ಡಾ.ಫ.ಗು.ಹಳಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು,
ಅವರ ವಚನ ಸಾಹಿತ್ಯದಲ್ಲಿನ ತತ್ವ ಹಾಗೂ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ತಮ್ಮ ಜೀವನವನ್ನು ಸಾರ್ಥಕ ಪಡೆಸಿ ಕೊಳ್ಳ ಬೇಕೆಂದು ಹೇಳಿದರು,
ಪತ್ರಕರ್ತ ಕೆ.ಎಸ್.ಗಣೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ತಮ್ಮ ಆಸ್ತಿಪಾಸ್ತಿಗಳನ್ನು ಮಾರಿ ೨೫೦ಕ್ಕೂ ಹೆಚ್ಚು ವಚನದ ಗ್ರಂಥಗಳನ್ನು ಪ್ರಕಟಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಿದರು ಎಂದು ವಿವರಿಸಿದರು,
ರಾಜ್ಯ ಪ್ರಶಸ್ತಿ ಪುರಸ್ಕೃತ ಹರಿಕಥಾ ವಿದ್ವಾನ್ ಎನ್.ಆರ್.ಜ್ಞಾನಮೂರ್ತಿ ನೀಡಿದ ಉಪನ್ಯಾಸದಲ್ಲಿ ಹಳಿಕಟ್ಟಿ ಅವರು ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು, ಅಲ್ಲಮ ಪ್ರಭು, ಬಸವಣ್ಣ, ಶಿವಶರಣರ ವಿಶ್ವಭಾತೃತ್ವದ ಸಂದೇಶಗಳನ್ನು ನೀಡಿದರು. ಜಾತೀಯತೆ ವಿರುದ್ದ ಹೋರಾಟದ ಬಸವ ತತ್ವಗಳು ವಿಶ್ವದಲ್ಲಿ ಎಂದೆಂದಿಗೂ ಪ್ರಸ್ತುತ ಎಂದರು.
ಶಿವಾನುಭವ ಪತ್ರಿಕೆ, ಸಿದ್ದೇಶ್ವರ ಬ್ಯಾಂಕ್, ಮುಂತಾದ ಜನಹಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಹಿನ್ನಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಹಳಿಕಟ್ಟಿ ಅವರಿಗೆ ಡಾಕ್ಟರೇಟ್ ಪದವಿ ನೀಡಿತು. ಅವರ ಕೊನೆಯ ಪುಸ್ತಕ ವಚನ ಧರ್ಮಸಾರವಾಗಿತ್ತು ಎಂದ ಅವರು ಹಳಿಕಟ್ಟಿ ಅವರ ಜೀವನ ಚರಿತ್ರೆಯನ್ನು ವಿವರಿಸಿದರು,
ವೇದಿಕೆಯಲ್ಲಿ ಶರಣ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಬಿ.ಸುರೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಕೆ.ಬಿ.ಬೈಲಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ಬರಾಯಪ್ಪ, ಜೈ,ಕರ್ನಾಟಕ ಸಂಘಟನೆಯ ಅಧ್ಯಕ್ಷ ತ್ಯಾಗರಾಜ್, ಪೋಸ್ಟ್ ನಾರಾಯಣಸ್ವಾಮಿ ಉಪಸ್ಥಿತರಿದ್ದರು,
ಕನ್ನಡ ಮತ್ತು ಸಂಸ್ಮೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಆರ್,ಗೀತಾ ಸ್ವಾಗತಿಸಿದರು, ಕಲಾವಿದೆ ರೇಣುಕಾ ನಿರೂಪಿಸಿದರು,