ಜಗಳೂರಿನ ಯುಡಿಐಡಿ ಕಾರ್ಡ್ ಶಿಬಿರದಲ್ಲಿ 61 ವಿಕಲ ಚೇತನರು ಭಾಗಿ
ಸಂಜೆವಾಣಿ ವಾರ್ತೆ
ಜಗಳೂರು.ಜು.೩; ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆಯಲ್ಲಿ ಯುಡಿಐಡಿ ಕಾರ್ಡ್ ಶಿಬಿರದ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.ವಿಶೇಷ ಚೇತನ ಬಾಲಕಿ ಸ್ನೇಹರವರಿಂದ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.ಪ್ರತಿ 3 ತಿಂಗಳಿಗೊಮ್ಮೆ ಯುಡಿಐಡಿ ಕಾರ್ಡ್ ಶಿಬಿರ ನಡೆಸಲಾಗುವುದು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಶ್ವನಾಥ್ ತಿಳಿಸಿದರು.ವಿಕಲಚೇತನ ಅಭಿವೃದ್ಧಿ ಸಂಘದ ರಾಜ್ಯಾಧಕ್ಷರಾದ ಮಹಾಂತೇಶ್ ಬ್ರಹ್ಮ ಮಾತನಾಡಿ ತಾಲ್ಲೂಕಿನಲ್ಲಿ ವಿವಿಧ ರೀತಿಯ ಅಂಗವೈಕಲ್ಯತೆಯುಳ್ಳ 61 ವಿಕಲಚೇತನರು ಯುಡಿಐಡಿ ಕಾರ್ಡ್ ಶಿಬಿರದಲ್ಲಿ ಭಾಗವಹಿಸಿ ಗುರುತಿನ ಚೀಟಿಯ ಅನುಕೂಲತೆಯನ್ನು ಪಡೆದಿದ್ದಾರೆ ಮುಂದಿನ ದಿನಗಳಲ್ಲಿ ಇವರೆಲ್ಲರಿಗು ಸರ್ಕಾರಿ ಯೋಜನೆಯನ್ನು ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ವಿಕಲಚೇತನರ ಅಭಿವೃದ್ಧಿ ಸಂಘ ಮಾಡುತ್ತದೆ ಎಂದು ಭರವಸೆ ನೀಡಿದರು.ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎಂ.ಎಸ್. ನಜೀರ್ ಅಹಮದ್ ರವರು ಜ್ಯೂಸ್ ಮತ್ತು ನೀರಿನ ಬಾಟಲಿಗಳನ್ನು ವಿತರಣೆ ಮಾಡುವುದರ ಮೂಲಕ ವಿಶೇಷ ಚೇತನರಿಗೆ ಆಸರೆ ನೀಡಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಷಣ್ಮುಖಪ್ಪ.ವಿಕಲಚೇತನರ ನೋಡೆಲ್ ತಾಲ್ಲೂಕಿನ ಅಧಿಕಾರಿ ಟಿ.ಶಾಂತಮ್ಮ.ಸರ್ಕಾರಿ ಆಸ್ಪತ್ರೆಯ ದಾದಿಯ ರಾದ ಏಕಾಂತಮ್ಮ.ಮೀನಾಕ್ಷಮ್ಮ.ಮರೇನಹಳ್ಳಿ ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಹೊನ್ನುರಪ್ಪ   ಭರಮಸಮುದ್ರ ಗ್ರಾಮ ಪಂಚಾಯತಿ ಸದಸ್ಯ ಜೆ.ಟಿ. ಸೋಮಣ್ಣ. ಬಸವರಾಜ್ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳ ಪುನರ್ವಸತಿ ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು.