ರೈಲಿಗೆ ಬಿದ್ದು ವೈರ್‍ಲೆಸ್ ವಿಭಾಗದ ಇನ್ಸ್‍ಪೆಕ್ಟರ್ ಆತ್ಮಹತ್ಯೆ
ಕಲಬುರಗಿ,ಜು.3-ಚಲಿಸುತ್ತಿದ್ದ ರೈಲಿಗೆ ಬಿದ್ದು ವೈರ್‍ಲೆಸ್ ವಿಭಾಗದ ಇನ್ಸ್‍ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿದ್ದಾಪುರ ಕಾಲೋನಿಯ ರೈಲು ಹಳಿ ಬಳಿ ಮಂಗಳವಾರ ಸಾಯಂಕಾಲ ನಡೆದಿದೆ.
ನಗರ ಪೊಲೀಸ್ ಆಯುಕ್ತಾಲಯದ ವೈರ್‍ಲೆಸ್ ವಿಭಾಗದಲ್ಲಿ ಇನ್ಸ್‍ಪೆಕ್ಟರ್ ಆಗಿದ್ದ ಬಾಪುಗೌಡ ತಂದೆ ಮುದುಗೌಡ ಪಾಟೀಲ ಎಂಬುವವರೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಚಲಿಸುತ್ತಿದ್ದ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.