ರಾಜ್ಯದ ಕಾರ್ಮಿಕರ ಸಚಿವರ ಪ್ರವಾಸ
ಕಲಬುರಗಿ:ಜು.03:ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 5 ರಂದು ಶುಕ್ರವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಸರ್ಕಾರಿ ಅತಿಥಿ ಗೃಹದಲ್ಲಿ ಕಲಬುರಗಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.
ಅಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ವಿಭಾಗದ (ಬೀದರ ಹೊರತುಪಡಿಸಿ) ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುಲಬರ್ಗಾ ಜಿಲ್ಲೆ ಕಾರ್ಖಾನೆಗಳ ಆಡಳಿತ ವರ್ಗದ ಮುಖ್ಯಸ್ಥರೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3.45 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳ ಜೊತೆ ಸಭೆ ನಡೆಸುವರು. ಸಂಜೆ 4.30 ಗಂಟೆಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ಮತ್ತು ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ನಂತರ ಜುಲೈ 6 ರಂದು ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸುವರು.