ಬೊಮ್ಮಸಂದ್ರ ಪುರಸಭೆ ವತಿಯಿಂದ ಸ್ವಚ್ಛತಾ ಅಭಿಯಾನ
ಆನೇಕಲ್.ಸೆ.೨೭-ಕಿತ್ತಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಬೊಮ್ಮಸಂದ್ರ ಪುರಸಭೆ ವತಿಯಿಂದ ಸ್ವಚ್ಚತಾ ಅಭಿಯಾನವನ್ನು ನಡೆಯಿತು.
ಇದೇ ಸಂಧರ್ಭದಲ್ಲಿ ಬೊಮ್ಮಸಂದ್ರ ಪುರಸಭೆಯ ಪರಿಸರ ಅಭಿಯಂತರರಾದ ಉಮಾ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಭಂದಿಸಿದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಹಾಗೆಯೇ ಕಸದಿಂದ ಆಗುವಂತಹ ಸಮಸ್ಯೆಗಳ ಬಗ್ಗೆ ಜೊತೆಗೆ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕಾದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೊಮ್ಮಸಂದ್ರ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್. ಸುದಾ ಹಿರೇಮಠ್ ಹಾಗೂ ಶಾಲೆಯ ಶಿಕ್ಷಕರು ಮತ್ತು ಸ್ಥಳೀಯ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.