ಹುಲಿಬೆಲೆ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಬಂಗಾರಪೇಟ.ಸೆ.೨೭- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಿಬೆಲೆ ೨೦೦೬-೦೭ ನೇ ಸಾಲಿನ ವಿದ್ಯಾರ್ಥಿಗಳಿಂದ ೧೮ ವರ್ಷಗಳ ನಂತರ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಚಂದ್ರಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಹಳೆಯ ವಿದ್ಯಾರ್ಥಿಗಳು ಎಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಎಂದರು.
ಅನ್ನಪೂರ್ಣರವರು ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನ ಬಗ್ಗೆ ತಿಳಿಸಿದರು. ಶಾಕುಂತಲಮ್ಮ ವಿದ್ಯಾರ್ಥಿಗಳ ಹಾಗೂ ಗುರುಗಳ ಆತ್ಮೀಯತೆ ಬಗ್ಗೆ ತಿಳಿಸಿದರು. ಪ್ರಮೀಳಮ್ಮನವರು ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳ ಸ್ನೇಹತ್ವ ಬಗ್ಗೆ ತಿಳಿಸಿದರು.
ನಾಗರತ್ನಮ್ಮನವರು ಮಾತನಾಡಿ ಈಗಿನ ಶಾಲಾ ವಿದ್ಯಾರ್ಥಿಗಳ ವಾತಾವರಣದ ಬಗ್ಗೆ ತಿಳಿಸಿದರು. ಚೇತನರವರು ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳ ಸಮನ್ವತೆಯ ಬಗ್ಗೆ ತಿಳಿಸಿಕೊಟ್ಟರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಿಬೆಲೆ ೨೦೦೬-೦೭ ನೇ ಸಾಲಿನ ಎಲ್ಲಾ ವಿದ್ಯಾರ್ಥಿಗಳು ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲಾ ಶಿಕ್ಷಕರಿಗೂ ಸನ್ಮಾನಿಸಿದರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಿಬೆಲೆಯಲ್ಲಿ ಸೇವೆ ಸಲ್ಲಿಸಿದ ಮುಖ್ಯೋಪಾಧ್ಯಾಯರಾದ ರಾಮಚಂದ್ರಪ್ಪ, ವೆಂಕಟಮ್ಮ, ಅನ್ನಪೂರ್ಣ, ಶಾಕುಂತಲಮ್ಮ, ಪ್ರಮೀಳಮ್ಮ, ನಾಗರತ್ನಮ್ಮ, ರಮೇಶ್, ಚೇತನ, ರುಕ್ಮಣಿ ಆಗಮಿಸಿ ವಿದ್ಯಾರ್ಥಿಗಳ ಯಶಸ್ಸನ್ನು ಬಯಸಿ ಆಶೀರ್ವದಿಸಿದರು.