9ನೇ ತರಗತಿಯಲ್ಲಿ ಬಸವೇಶ್ವರ ಜೀವನ ಚರಿತ್ರೆ ಸತ್ಯ ಮತ್ತು ವೈಜ್ಞಾನಿಕ : ಚನ್ನಬಸವಾನಂದ
ಬೀದರ್:ಜು.3: 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಶ್ವಗುರು ಬಸವಣ್ಣನವರು ಎಂಬ ಶೀರ್ಷಿಕೆಯಡಿಯಲ್ಲಿ ಬರೆದಿರುವ ವಿಷಯ ಸೂಕ್ತ ಮತ್ತು ವೈಜ್ಞಾನಿಕವಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಜಗದ್ಗುರು ಡಾ. ಚನ್ನಬಸವಾನಂದ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು ಬಸವಣ್ಣನವರ ಇತಿಹಾಸವನ್ನು ವಾಸ್ತವಿಕ ನೆಲೆಗಟ್ಟಿನ ಮೇಲೆ ಬರೆಯಲಾಗಿದೆ. ಇದಕ್ಕಾಗಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ಒಂದು ವೇಳೆ ಬಸವಣ್ಣನವರ ಕುರಿತಾದ ಈಗಿನ ವಿಷಯ ತಿರುಚಿದರೆ ಸರ್ಕಾರವು ಬಸವ ಭಕ್ತರ ವಿರೋಧ ಎದುರಿಸಬೇಕಾದೀತು ಎಂದಿದ್ದಾರೆ.