ಎನ್.ಶಶಿಕುಮಾರ ಹು.ಧಾ ಪೊಲೀಸ್ ಕಮಿಷನರ್

ಹುಬ್ಬಳ್ಳಿ,ಜು.3: ಹುಬ್ಬಳ್ಳಿ-ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
2007ರ ಬ್ಯಾಚ್‍ನ ಐಪಿಎಸ್ ಅಧಿಕಾರಿ ಆಗಿರುವ ಶಶಿಕುಮಾರ ಅವರು, ಬೆಂಗಳೂರಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ವರ್ಗಾವಣೆಯಾಗಿದ್ದು ತೆರವಾದ ಅವರ ಸ್ಥಾನಕ್ಕೆ ಗುಪ್ತಚರ ಇಲಾಖೆಯಲ್ಲಿ ಎಸ್ಪಿ ಆಗಿದ್ದ ಐಪಿಎಸ್ ಅಧಿಕಾರಿ ಮಹಾನಿಂಗ ನಂದಗಾವಿ ಅವರನ್ನು ನಿಯೋಜಿಸಲಾಗಿದೆ.
ನೂತನ ಕಮಿಷನರ್ ಮತ್ತು ಡಿಸಿಪಿ ಇಂದು ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.
ಹು-ಧಾ ಪೊಲೀಸ್ ಆಯುಕ್ತರಾಗಿದ್ದ ರೇಣುಕಾ ಸುಕುಮಾರ್ ಅವರನ್ನು ಬೆಂಗಳೂರಿನ ಅಪರಾಧ ವಿಭಾಗಕ್ಕೆ ಎಐಜಿಪಿ ಯಾಗಿ ಹಾಗೂ ಡಿಸಿಪಿಯಾಗಿದ್ದ ಕುಶಾಲ ಚೌಕ್ಸೆ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.