ನೇಮಕ
ಲಕ್ಷ್ಮೇಶ್ವರ,ಜು3: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದ ಯುವ ಮುಖಂಡ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಮಹಬೂಬ ಅಲಿ ಗಾಡ್ಗೋಳಿ ಅವರು ಇತ್ತೀಚೆಗೆ ಚಿತ್ರದುರ್ಗದಲ್ಲಿ ಜರುಗಿದ ಕರ್ನಾಟಕ ರಾಜ್ಯ ನದಾಫ್ ಪಿಂಜಾರ ಸಂಘದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕಿನ ನದಾಫ್ ಪಿಂಜಾರ ಸಂಘದ ಅಧ್ಯಕ್ಷರು ಗದಗ ಜಿಲ್ಲಾ ಘಟಕದ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ.