ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ‘ಶ್ರೇಷ್ಠ ವೈದ್ಯ ಪ್ರಶಸ್ತಿ’
ಸಂಜೆವಾಣಿ ವಾರ್ತೆ,
ವಿಜಯಪುರ,ಜು.3 :ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕÀ ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ರಾಜ್ಯ ಸರ್ಕಾರದಿಂದ ‘ಶ್ರೇಷ್ಠ ವೈದ್ಯ ಪ್ರಶಸ್ತಿ’ಯನ್ನು ಸೋಮವಾರ ವಿಧಾನಸೌಧದ ಬ್ಯಾಂಕ್ವೆÉಟ್ ಹಾಲ್‍ನಲ್ಲಿ ನಡೆದ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವÀರು ಪ್ರದಾನ ಮಾಡಿದರು.
ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್, ಪ್ರಧಾನ ಕಾರ್ಯದರ್ಶಿದ ಹರ್ಷ ಗುಪ್ತಾ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆರ್‍ಸಿಎಚ್ ಅಧಿಕಾರಿ ಡಾ. ಕೇಶರ್‍ಸಿಂಗ್ ಗುಂಡಬಾವಡಿ ಅವರಿಗೆ ಉತ್ತಮ ಆರ್‍ಸಿಎಚ್ ವಿಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಕಣ್ಣಿನ ವಿಭಾಗದ ವೈದ್ಯೆ ಡಾ. ಮೀನಾಕ್ಷಿ ಮುತ್ತಪ್ಪನವರ ಅವರಿಗೆ ಉತ್ತಮ ವೈದ್ಯರೆಂದು ಹಾಗೂ ಇಂಡಿ ತಾಲೂಕಾ ವೈದ್ಯಾಧಿಕಾರಿ ಡಾ. ಅರ್ಚನಾ ಕುಲಕರ್ಣಿ, ಮುಳವಾಡ ವೈದ್ಯಾಧಿಕಾರಿ ಡಾ. ನಂದಿನಿ ಅವರುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಶಸ್ತಿ ನೀಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅಭಿನಂದನೆ ಸಲ್ಲಿಸಿದ್ದಾರೆ.