ಆಸ್ಪತ್ರೆಯಿಂದ ಮರಳಿದ ಸಾಲೂರು ಮಠದ ಶ್ರೀಗಳು
ಸಂಜೆವಾಣಿ ವಾರ್ತೆ
ಹನೂರು. ಜು 3 :- ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮಿ ರವರನ್ನು ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಹಾಗೂ ಡಾಕ್ಟರ್ ಪ್ರೀತನ್ ನಾಗಪ್ಪ ಅವರು ಭೇಟಿ ಮಾಡಿದ್ದಾರೆ.
ಸಾಲೂರು ಶ್ರೀಮಠದ ಗುರುಸ್ವಾಮಿಗಳವರು ಅನಾರೋಗ್ಯ ಸಮಸ್ಯೆಯಿಂದ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾಗಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಡಾ.ಪ್ರೀತನ್ ನಾಗಪ್ಪ ಅವರು ಭೇಟಿ ನೀಡಿ ಅವರ ಆರೋಗ್ಯ ಸ್ಥಿತಿ ಯೋಗ ಕ್ಷೇಮವನ್ನು ವಿಚಾರಿಸಿ ಶ್ರೀಗಳ ಆಶೀರ್ವಾದ ಪಡೆದರು. ಆದಷ್ಟು ಬೇಗ ಗುಣಮುಖರಾಗಿ ಬರಲಿದ್ದಾರೆ ಎಂದು ತಿಳಿಸಿದ್ದಾರೆ.ಗುರು ಸ್ವಾಮೀಜಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಆಸ್ಪತ್ರೆಯಿಂದ ಮರಳಿದ್ದಾರೆ. ಅಗತ್ಯ ಚಿಕಿತ್ಸೆಯ ಜತೆಗೆ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ. ಈ ಬಗ್ಗೆ ಮುತುವರ್ಜಿ ವಹಿಸಲಾಗಿದೆ.