ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ
ಕಲಬುರಗಿ:ಜು.2:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 13 ರಂದು ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸುವರು.
ಜುಲೈ 15 ರಂದು ಸೋಮವಾರ ರಾತ್ರಿ 8.30 ಗಂಟೆಗೆ ಬೀದರದಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ 16 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. ಮಧ್ಯಾಹ್ನ 1.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಮತ್ತು ಸಂಜೆ 4 ಗಂಟೆಗೆ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯಕ್ಕೆ ಭೇಟಿ ಹಾಗೂ ಪರಿಶೀಲನೆ ನಡೆಸುವರು. ನಂತರ ಸಂಜೆ 7.45 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.