ಪ್ರಭಾಕರ್‌ಗೆ ಸನ್ಮಾನ
ಕೋಲಾರ,ಜು,೩: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಸಾಧನೆ ಮಾಡಿದ ಸಾಧಕರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸನ್ಮಾನಿಸಿದರು.
ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಗೋಪಿನಾಥ್, ರಾಜ್ಯ ಖಜಾಂಚಿ ವಾಸುದೇವಹೊಳ್ಳ, ಕಾರ್ಯಕಾರಿ ಸಮಿತಿ ಸದಸ್ಯರದ ಕೆ.ಎಸ್.ಗಣೇಶ್, ವಿ.ಮುನಿರಾಜು,ಮಹಮದ್ ಯೂನೂಸ್ ಮತ್ತಿತರರು ಹಾಜರಿದ್ದರು.