ಭ್ರಷ್ಟಾಚಾರ ವಿರೋಧಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ
ಕಲಬುರಗಿ,ಜು.2-ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿರೋಧಿಸಿ ಮತ್ತು ಅರ್ಜಿಗಳನ್ನು ವಿಲೇವಾರಿ ಮಾಡಲು ಕಾರ್ಮಿಕ ಇಲಾಖೆ ಹೊಸದಾಗಿ ತಂದಿರುವ ಮಾರ್ಗಸೂಚಿಗಳನ್ನು (ಎಸ್‍ಒಪಿ) ರದ್ದು ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಬೇಡಿಕೆಗಳ ಮನವಿಪತ್ರ ಸಲ್ಲಿಸಿದರು.
ಸಮಿತಿ ಅಧ್ಯಕ್ಷ ಶಂಕರ ಕಟ್ಟಿ ಸಂಗಾವಿ, ಕಾರ್ಯಾಧ್ಯಕ್ಷ ಪ್ರಭುದೇವ ಯಳಸಂಗಿ, ನಾಗಯ್ಯ ಸ್ವಾಮಿ, ಶಿವಲಿಂಗಮ್ಮ ಲೇಂಗಟಿಕರ್, ಅಲ್ಲಾವುದ್ದೀನ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.