ಜಿಲ್ಲೆಯ 7 ವೈದ್ಯರಿಗೆ ಕರ್ನಾಟಕ ರಾಜ್ಯ ಶ್ರೇಷ್ಠ ವೈದ್ಯ ಶ್ರೀ ಪುರಸ್ಕಾರ
ಕಲಬುರಗಿ,ಜು.2-ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ರಾಷ್ಟೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಜಿಲ್ಲೆಯ 7 ಜನ ವೈದ್ಯರಿಗೆ ಕರ್ನಾಟಕ ರಾಜ್ಯ ಶ್ರೇಷ್ಠ ವೈದ್ಯಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡುರಾವ ಅವರು ಜಿಲ್ಲಾ ಆರ್‍ಸಿಹೆಚ್‍ಒ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಶಹಾಬಾದನ ರಾಷ್ಟ್ರೀಯ ಬಾಯಿ ಆರೋಗ್ಯ ಪಾಲಿಸಿ ನೊಡಲ್ ಅಧಿಕಾರಿಗಳು ಹಾಗೂ ಮುಖ್ಯ ದಂತ ಅಧಿಕಾರಿ ಡಾ.ಸಂಧ್ಯಾ ಸುರೇಶ್ ಕಾನೇಕರ್, ಆಳಂದ ಸರ್ಕಾರಿ ಆಸ್ಪತ್ರೆಯ ಜನರಲ್ ಸರ್ಜನ್ ಡಾ.ಪ್ರಮೋದ್ ಸಂಗೊಳಗಿ, ಕಾಳಗಿ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ವೈದ್ಯ ಡಾ.ಅಮರೇಶ್, ಜೇವರ್ಗಿ ಸರ್ಕಾರಿ ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ.ಲಕ್ಷ್ಮಣ್ ಪೂಜಾರಿ, ರೇವೂರ (ಬಿ) ಪ್ರಾಥಮಿಕ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಸನ್ನ ಕಟ್ಟಿ, ಇಜೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ. ಡಾ.ಉಮೇಶ ಶರ್ಮ ಅವರಿಗೆ ಕರ್ನಾಟಕ ರಾಜ್ಯ ಶ್ರೇಷ್ಠ ವೈದ್ಯ ಶ್ರೀ ಪುರಸ್ಕಾರ ನೀಡಿ ಗೌರವಿಸಿದರು.