ಮಲೈ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ
ಸಂಜೆವಾಣಿ ವಾರ್ತೆ
ಹನೂರು ಸೆ 27 :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 28 ದಿನಗಳಲ್ಲಿ ಸುಮಾರು 1 ಕೋಟಿ, 64.ಲಕ್ಷ, 22.ಸಾವಿರ ರೂ. ಸಂಗ್ರಹವಾಗಿದೆ.
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 6.30 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ . ಹಾಗೂ ಪ್ರಾಧಿಕಾರ ಕಾರ್ಯದರ್ಶಿ ರಘು ರವರ ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.
ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ದಿನಾಂಕ 29/08/2024 ರಿಂದ 25/09/2024 ರವರಿಗೆ 28 ದಿನಗಳಲ್ಲಿ ಒಟ್ಟು ಮೊತ್ತ ರೂ.1,64,22,932.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 21 ಗ್ರಾಂ, ಬೆಳ್ಳಿ 2 ಕೆಜಿ.100 ಗ್ರಾಂ. ಹುಂಡಿಯಲ್ಲಿ ದೊರೆತಿದೆ. ಹಾಗೂ ಚಲಾವಣೆಯಾಗದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ದೊರೆತಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರು ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ವೇತಾ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಪ್ ಬರೋಡ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.