ಅಮೃತ ಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
ಅಥಣಿ :ಜು.2: ಪಟ್ಟಣದಲ್ಲಿರುವ ಪುರಾತನ ಅಮೃತ ಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಪರಿಶೀಲಿಸಿದರು.
ಈ ವೇಳೆ ಅಲ್ಲಿನ ಭಕ್ತಾದಿಗಳಿಂದ ಸನ್ಮಾನ ಸ್ವೀಕರಿಸಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ ಈ ಪುರಾತನ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಶಟ್ಟರ ಮಠದ ಮರುಳಸಿದ್ದ ಸ್ವಾಮೀಜಿ. ಮುಖಂಡರಾದ ಆನಂದ ಟೋಣಪೆ. ರಾಜು ಬುಲಬುಲೆ. ಸುರೇಶ ಗೊಟಖಿಂಡಿ. ವಿಜಯಸಿಂಗ ರಜಪೂತ. ಫೈಸಲ್ ಮೋಮಿನ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.