ಕನ್ನಡಿಗರಿಗೆ ಉದ್ಯೋಗ ಒದಗಿಸಲು ಕಾಯ್ದೆ ರೂಪಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ
ವಿಜಯಪುರ,ಜು.2:ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಲು ಕಾಯ್ದೆ ರೂಪಿಸಿ ಜಾರಿಗೊಳಿಸಲು ಒತ್ತಾಯಿಸಿ ಜಿಲ್ಲಾ ರಕ್ಷಣ ವೇದಿಕೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟ ಕರವೇ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮೆರವಣಿಗೆ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷÀ ಶ್ರೀಶೈಲ ಮುಳಜಿ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಮುಂಭಾಗ ಕರ್ನಾಟಕರಕ್ಷಣಾ ವೇದಿಕೆ ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ತಾಯಿನಾಡು ಕರ್ನಾಟಕ ದೇಶದಲ್ಲೇ ಅತಿಹೆಚ್ಚು ಭೌಗೋಳಿಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯ. ಪ್ರಕೃತಿ ಸೌಂದರ್ಯಕ್ಕೆ, ಅತ್ಯುತ್ತಮ ಹವಾಗುಣಕ್ಕೆ ಹೆಸರಾದ ರಾಜ್ಯ. ಕನ್ನಡಿಗರು ಶಾಂತಿಪ್ರಿಯರು, ಹೃದಯ ಶ್ರೀಮಂತರು. ಕನ್ನಡಿಗರು ದೇಶದಲ್ಲೇ ಮೊದಲು ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕಿದವರು. ಕನ್ನಡ ನಾಡು ಸಾಂಸ್ಕøತಿಕವಾಗಿ, ಸಾಹಿತ್ಯಿಕವಾಗಿ, ಚಾರಿತ್ರಿಕವಾಗಿ ವೈಭವದ ಇತಿಹಾಸವನ್ನು ಹೊಂದಿದ ನಾಡು. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಇಂತಹÀ ಸಕಲ ಸಮೃದ್ಧಿಯ ನಾಡಿಗೆ ಇತರ ರಾಜ್ಯಗಳಿಂದ ದೊಡ್ಡ ಪ್ರಮಾಣದ ವಲಸೆ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಇತ್ತೀಚಿನ ಎರಡು ಮೂರು ದಶಕಗಳಲ್ಲಿ ಇದು ತಾರಕಕ್ಕೇರಿದೆ. ಮೊದಲು ದಕ್ಷಿಣ ಭಾರತದ ಇತರ ರಾಜ್ಯಗಳಿಂದ ಜನರು ವಲಸೆ ಬಂದು ಇಲ್ಲಿ ನೆಲೆ ನಿಂತರು. ಈಗ ಉತ್ತರದ ರಾಜ್ಯಗಳು, ಈಶಾನ್ಯ ರಾಜ್ಯಗಳಿಂದ ಜನರ ಪ್ರವಾಹವೇ ಹರಿದು ಬರುತ್ತಿದೆ. ವಿಶೇಷವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರಿನಂತಹ ಮಹಾನಗರಗಳಲ್ಲಿ ವಲಸೆ ಪ್ರಮಾಣ ಮಿತಿ ಮೀರಿದೆ ಎಂದು ಹೇಳಿದರು.
ರಾಜ್ಯ ಉಪಾಧ್ಯಕ್ಷ ಎಂ.ಸಿ. ಮುಲ್ಲಾ ಮಾತನಾಡಿ, ವಲಸೆಯ ದುಷ್ಪರಿಣಾಮದಿಂದಾಗಿ ಕನ್ನಡ ನಾಡಿನ ಭೌಗೋಳಿಕ, ಸಾಮಾಜಿಕ, ರಾಜಕೀಯ ವಾತಾವರಣವೇ ಬದಲಾಗುತ್ತಿದೆ. ವಿಶೇಷವಾಗಿ ರಾಜ್ಯದ ರಾಜಧಾನಿ ಬೆಂಗಳೂರು ಈ ದೊಡ್ಡ ಪ್ರಮಾಣದ ವಲಸೆಯಿಂದ ಬಸವಳಿದು ಹೋಗುತ್ತಿದೆ. ಈ ಮಹಾವಲಸೆಯ ಬಹುಮುಖ್ಯ ದುಷ್ಪರಿಣಾಮ ಕನ್ನಡದ ಯುವ ಸಮುದಾಯಕ್ಕೆ ದೊಡ್ಡ ಅನ್ಯಾಯ ಆಗುತ್ತಿದೆ. ಕನ್ನಡಿಗರಿಗೆ ಈಗ ಉದ್ಯೋಗವಿಲ್ಲದಂತಾಗಿದೆ. ಕನ್ನಡದ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿದ್ದು, ಅವರು ತಮ್ಮ ರಾಜ್ಯದ ಯುವಕ, ಯುವತಿಯರನ್ನು ಕರೆತಂದು ಕೆಲಸ ಕೊಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರ ಪ್ರಮಾಣ ದಿನೇದಿನೇ ಕುಸಿಯುತ್ತಲೇ ಬರುತ್ತಿದೆ. ಹೀಗೇ ಮುಂದುವರೆದರೆ ಕನ್ನಡಿಗರು ಮುಂಬರುವ ದಿನಗಳಲ್ಲಿ ತಮ್ಮ ನೆಲದಲ್ಲಿ ತಾವೇ ಅತಂತ್ರರಾಗಿ ನರಕಯಾತನೆ ಅನುಭವಿಸುವ ಸ್ಥಿತಿ ಬಂದೊದಗಲಿದೆ ಎಂದು ಆಕ್ರೋಶ ಹೊರ ಹಾಕಿದರು.
ರಾಜ್ಯ ಸಂಚಾಲಕ ಸಂತೋಷ ಪಾಟೀಲ (ಡಂಬಳ) ಮಾತನಾಡಿ, ಇಂತಹ ಸಂದರ್ಭದಲ್ಲಿ ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ದಕ್ಕಬೇಕು ಎಂದು ನಾವೆಲ್ಲರೂ ದಶಕಗಳಿಂದ ಹೋರಾಡುತ್ತ ಬಂದಿದ್ದೇವೆ. ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟವನ್ನು ರಾಜ್ಯದ ಮೂಲೆ ಮೂಲೆಯಲ್ಲೂ ಸಂಘಟಿಸುತ್ತ ಬಂದಿದೆ. 2014ರಲ್ಲಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಿಂದ ವಿಧಾನಸೌಧದವರೆಗೆ ಬಹುದೊಡ್ಡ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿತ್ತು. ಆದರೆ ನಮ್ಮ ಕೂಗಿಗೆ ಇದುವರೆಗೆ ರಾಜ್ಯ ಸರ್ಕಾರಗಳು ಸರಿಯಾದ ರೀತಿಯಲ್ಲಿ ಸ್ಪಂದಿಸಿರುವುದು ಖೇದಕರ ಎಂದರು.
ಜಿಲ್ಲಾ ಸಂಚಾಪಲಕ ಸಾಯಬಣ್ಣ ಮಡಿವಾಳರ, ಜಿಲ್ಲಾಧ್ಯಕ್ಷೆ ಅನುರಾಧ ಕಲಾಲ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ಸತ್ಯಾಗ್ರಹ ಕೈಗೊಳ್ಳಲಾಯಿತು.
ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವನಗೌಡ ಗುಜಗೊಂಡ, ಜಿಲ್ಲಾ ಕಸಾಪ ಅಧ್ಯಕ್ಷÀ ಹಾಸೀಂಪಿರ ವಾಲಿಕಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಬಿಜಾಪುರ, ಡಾ. ಎಮ್.ಡಿ. ಮೇತ್ರಿ, ಸಾಮಾಜಿಕ ಜಾಲತಾಣದ ಸಂಚಾಲಕ ದಸ್ತಗೀರ ಸಾಲೋಟಗಿ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ರಾವಜಿ, ಮಹಿಳಾ ಜಿಲ್ಲಾಧ್ಯಕ್ಷೆ ಅನುರಾಧ ಕಲಾಲ, ಗೌರವ ಅಧ್ಯಕ್ಷೆ ಮಂಜುಳ ಅಂಗಡಿ, ಸಾಂಸ್ಕøತಿಕ ಘಟಕದ ಜಿಲ್ಲಾಧ್ಯಕ್ಷ, ಪ್ರಶಾಂತ ಚೌದ್ರಿ, ಜಿಲ್ಲಾ ರೈತ ಘಟಕದ ಅಧ್ಯಕ್ಷ ಮಂಜುನಾಥ ಬಡಿಗೇರ, ವೈದ್ಯಕೀಯ ಘಟಕದ ಜಿಲ್ಲಾಧ್ಯಕ್ಷ ಮಲ್ಲನಗೌಡ ಬಗಲಿ, ನಗರ ಘಟಕದ ಅಧ್ಯಕ್ಷ ಫಯಾಜ್ ಕಲಾದಗಿ, ಸುರೇಶ ಜತ್ತಿ, ಇಂಡಿ ತಾಲೂಕ ಅಧ್ಯಕ್ಷ ಬಾಳು ಮುಳಜಿ, ವಿಜಯಪುರ ತಾಲೂಕ ಅಧ್ಯಕ್ಷ ವಿನೋದ ದಳವಾಯಿ, ಸಿಂದಗಿ ಅಧÀ್ಯಕ್ಷ ಶ್ರೀಕಾಂತ ಬಿಜಾಪುರ, ಚಡಚಣ ಅಧ್ಯಕ್ಷ ಸೋಮು ಬಡಿಗೇರ, ಬಬಲೇಶ್ವರ ಅಧ್ಯಕ್ಷ ಆನಂದ ಬೂದಿಹಾಳ, ರಾಜು ಕುಲಕರ್ಣಿ, ಹುಚ್ಚಪ್ಪ ತಳವಾರ, ಮನೋಹರ ತಾಜವ, ಸುನೀಲ ಮಾಗೆ, ನಾಗರಾಜ ಅವಟಿ, ಕೃμÁ್ಣ ಚವ್ಹಾಣ, ಈರಣ್ಣ ಕಲ್ಬುರ್ಗಿ, ಸಾದಿಕ್ ಜಾನ್ವೇಕರ, ರವಿ ಹೂಗಾರ, ನಸ್ಸೀಂ ರೋಜಿನ್ದಾರ, ಎಚ್‍ಎಸ್. ಕಬಾಡೆ. ರಜಾಕ ಕಾಖಂಡಕಿ, ಪ್ರಕಾಶ ಬಿರಾದಾರ, ಮಹೇಶ ಹೂಗಾರ, ನಾಥು ರಾಠೋಡ, ಸವಿತಾ ಖಂಡೇಕರ, ರುಕ್ಮಿಣಿ ಚವ್ಹಾಣ, ಬಸಮ್ಮ ಜಾಬಾ, ಮಲಕಮ್ಮ ಪಾಟೀಲ, ಶ್ರೀದೇವಿ ಬಡಿಗೇರ, ನೀಲಾ ಕಾಳೆ, ಅರವಿಂದ ಪಾಟೀಲ, ಸಿದ್ದುಗೌಡ ತೊರವಿ, ಪ್ರಹ್ಲಾದ ಕಾಂಬಳೆ, ಸಂಜು ಗುನ್ನಾಪುರ, ಅನೀಲ ಚವ್ಹಾಣ, ಲಕ್ಷ್ಮಣ ಬೆಟಗೇರಿ, ಪ್ರಕಾಶ ಮಹೇಂದ್ರಕರ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.