5 ರಂದು ಜಿಲ್ಲಾಧಿಕಾರಿಗಳ ಜನತಾ ದರ್ಶನ
ಸಂಜೆ ವಾಣಿ ವಾರ್ತೆ
ಕೊಟ್ಟೂರು, ಜು.02: ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ  ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಇದರ ಘನ ಉಪಸ್ಥಿತಿಯಲ್ಲಿ ಇದೇ 5 ರಂದು ಎಪಿಎಂಸಿ ಆವರಣದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.
 ಈ ದಿನದಂದು ಸಾರ್ವಜನಿಕರು ತಮ್ಮ ಅಹವಾಲುಗಳಿದ್ದಲ್ಲಿ ಸಲ್ಲಿಸಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವಂತೆ ತಹಶೀಲ್ದಾರ್ ಅಮರೇಶ್ ಜಾಲಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.