ಕೂಡ್ಲಿಗಿ ವೈದ್ಯ ಡಾ. ರವಿಕುಮಾರ್ ಗೆ ಶ್ರೇಷ್ಠ ವೈದ್ಯ ಪ್ರಶಸ್ತಿ. ಬೆಂಗಳೂರಿನಲ್ಲಿ ಸನ್ಮಾನ.
ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಜು.2 :- ರಾಷ್ಟ್ರೀಯ ವೈದ್ಯ ದಿನಾಚರಣೆಯ ನಿಮಿತ್ತ  ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯ ಆರ್ಥ್ತೋಪೇಡಿಕ್ಸ್ ವೈದ್ಯರಾದ ಡಾ ರವಿಕುಮಾರ ಶ್ರೇಷ್ಠ ವೈದ್ಯ ಪ್ರಶಸ್ತಿಗೆ ಭಾಜನಾರಾಗಿದ್ದು ಅವರಿಗೆ 2023ನೇ ಸಾಲಿನ ಅತ್ಯುತ್ತಮ ಸೇವೆಯನ್ನು ಗುರುತಿಸಿದ ಆರೋಗ್ಯ ಇಲಾಖೆ  ಬೆಂಗಳೂರಿನ ಆರೋಗ್ಯಸೌಧದಲ್ಲಿ ಸೋಮವಾರ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ ಗುಂಡೂರಾವ್, ಆಯುಕ್ತರಾದ ರಂದೀಪ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಸೇರಿದಂತೆ ಕೂಡ್ಲಿಗಿ ಶಾಸಕ ಡಾ ಶ್ರೀನಿವಾಸ ಹಾಗೂ ಇತರೆ ಹಿರಿಯ ವೈದ್ಯರು ಉಪಸ್ಥಿತರಿದ್ದರು.