ಬೆಲೆ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ,ಜು.2 : ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದವರು  ಜಿಲ್ಲಾಧಿಕಾರಿಗಳ ಕಚೇರಿ ಎದುರು ಎತ್ತಿನಗಾಡಿ ಮೇಲೆ ಬೈಕ್ ನ್ನು ಏರಿ, ದನಕರುಗಳ ಜೊತೆಗೆ ಪ್ರತಿಭಟನೆ ನಡೆಸಿದರು.ಹಾಲಿನ ದರವನ್ನು ರೂ.4ರಷ್ಟು ಏರಿಕೆ ಮಾಡಿ ಆ ಹಣವನ್ನು ರೈತರಿಗೆ ತಲುಪಿಸಲಾಗುವುದು ಎಂದು ಹೇಳಿಕೆ ಕೊಟ್ಟ, ಸರ್ಕಾರ ಇದುವರೆಗೂ ರೈತರಿಗೆ ತಲುಪಿಸದೆ, ಅಕ್ರಮ ಏಸಗಲಾಗಿದೆ. ಮತ್ತೇ ಈಗ ಆದೇ ಕಾರಣವನ್ನು ನೀಡಿ 2 ರೂ ಹೆಚ್ಚಿಸಲಾಗಿದ್ದು, 6 ರೂಗಳಲ್ಲಿ ರೈತರಿಗೆ ನೀಡಬೇಕು ಎಂದು ಒತ್ತಾಯಿಸಿದರು.ಕಳೆದ ಬಜೆಟ್ ನಲ್ಲಿ ಪ್ರೋತ್ಸಾಹ ಧನಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಪಶುಪಲನಾ ಇಲಾಖೆ ಇತರೆ ಖರ್ಚು ವೆಚ್ಚಗಳಿಗೆ ಕಾಂಗ್ರೇಸ್ ಸರ್ಕಾರ ಬಳಕೆಮಾಡಿಕೊಂಡಿದ್ದು, ಈ ವಿಷಯದ ಬಗ್ಗೆ ಸರ್ಕಾರ ಸ್ಪಷ್ಟನೆಯನ್ನು ನೀಡಬೇಕು. ಅಲ್ಲದೆ, ಬಾಕಿ ಉಳಿದಿರುವ ಎಂಟು ತಿಂಗಳ ಹಣವನ್ನುಕೇಳಿದರೆ ಹಾಲು ಒಕ್ಕೂಟದ ಅಧಿಕಾರಿಗಳು ಸಹಕಾರಿ ಇಲಾಖೆಯತ್ತ ಬೊಟ್ಟು ಮಾಡುತ್ತಾರೆ. ಸಹಕಾರ ಇಲಾಖೆಯವರು ಆರ್ಥಿಕ ಇಲಾಖೆ ಮೇಲೆ ಬೊಟ್ಟು ಮಾಡುತ್ತಾರೆ. ಈ ಗೊಂದಲದ ನಿವಾರಣೆ ಮಾಡಿ, ಹಣ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು‌.ಹಾಲಿನ ಪ್ರೋತ್ಸಾಹ ಹಣವೂ ಇಲ್ಲ. ಬರ ಪರಿಹಾರದ ಹಣವೂ ಇಲ್ಲ, ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಭೂ ಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ, ರೈತ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ದುಪ್ಪಟ್ಟು ಹಣವನ್ನು ಟ್ರಾನ್ಸ್ ಫಾರ್ಮರ್ ಗಳಿಗೆ ನೀಡುವಂತಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಮುದ್ರಾಂಕ ದರವನ್ನು ಏರಿಸಿರಯವುದರಿಂದ ಆಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ. ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲ. ರೈತರಿಗೆ ನಿಕಟವಾಗಿರುವ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಮುಚ್ಚಿ ಕುಳಿರುವುದುನ್ನು ನೋಡಿದರೆ ಭ್ರಷ್ಟಚಾರದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವುದು ಕಂಡುಬರುತ್ತದೆ ಎಂದು ಆರೋಪಿಸಿದರು.ಈ ಕೂಡಲೇ ಸರ್ಕಾರ ರೈತರಿಗೆ, ದಿನ ದಲಿತರಿಗೆ, ಬಡ ವರ್ಗಕ್ಕೆ, ಕೂಲಿ ಕಾರ್ಮಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.