ಹಾಸ್ಟೆಲ್ ಸೌಲಭ್ಯಕ್ಕೆ ಆಗ್ರಹ
ಸಂಜೆವಾಣಿ ವಾರ್ತೆ
ಹರಪನಹಳ್ಳಿ, ಜು.02:: ತಾಲೂಕಿನ ಎಸ್ಸಿ-ಎಸ್ಟಿ ಮತ್ತು ಒಬಿಸಿ ವಿದ್ಯಾರ್ಥಿಗಳಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಎಐಎಸ್‍ಎಫ್ ಸಂಘಟನೆ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.
ಶಾಲಾ-ಕಾಲೇಜು ಆರಂಭವಾಗಿ ತಿಂಗಳು ಕಳೆದರೂ ತಾಲೂಕಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸಿಗುತ್ತಿಲ್ಲ ಈ ಸಂಬಂಧ ಸರ್ಕಾರ ವಿಳಂಬ ಮಾಡುತ್ತಿದೆ, ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕೆ ಬರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಆಗುತ್ತಿದೆ ಹಳ್ಳಿಗಳಿಂದ ಬರಲು ಸೂಕ್ತ ಸಾರಿಗೆ ವ್ಯವಸ್ಥೆ ಸಹ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಮುಂದಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನೀಟ್ ಪರೀಕ್ಷಾ ಅಕ್ರಮ ಪ್ರಕರಣ ಇದೊಂದು ಬಹುದೊಡ್ಡ ಹಗರಣವಾಗಿದ್ದು ಇದರಲ್ಲಿ ಭಾಗಿಯಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು, ದೇಶದಲ್ಲಿ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದು, ಪ್ರತಿಭಾವಂತರಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕೆಂದು ಕೆಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಸಂಘಟನೆ ಮುಖಂಡರಾದ ರಮೇಶನಾಯ್ಕ, ಬಳಿಗನೂರು ಕೊಟ್ರೇಶ್, ಅರುಣ್‍ಕುಮಾರ್, ದೊಡ್ಡಬಸವರಾಜ, ಗುರುಬಸವರಾಜ, ಸುದೀಪ್, ವೀರೇಶ್, ಪಿ.ಎಸ್.ಪ್ರಸನ್ನಕುಮಾರ್, ಕೆ.ವಿಶ್ವನಾಥ, ಡಿ.ರೋಷ, ಜಮೀರ್, ದಾದಾಪೀರ್, ವಿ.ಬಿ.ಸಾಗರ್, ಬಿ.ಮಹೇಂದ್ರ, ಬಿ.ಆರ್.ಮಂಜುನಾಥ ಸೇರಿದಂತೆ ಇತರರು ಇದ್ದರು.