ಬೆಸ್ಟ್ ಪಿಯು ಕಾಲೇಜ್ ನಲ್ಲಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ
ಸಂಜೆವಾಣಿ ವಾರ್ತೆ
ಬಳ್ಳಾರಿ, ಜು.02: ನಗರದ ಹೊರವಲಯದಲ್ಲಿರುವ ಬೆಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ ಫ್ರೆಶರ್ಸ್ ಡೇ’ ಸಮಾರಂಭವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂಸ್ಥೆಯ ಉಪಾಧ್ಯಕ್ಷರಾದ ಕೋನಂಕಿ ತಿಲಕ್ ಕುಮಾರ್ ರವರು ಮುಖ್ಯಸ್ಥರೊಂದಿಗೆ ಆಗಮಿಸಿ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದ್ವಿತೀಯ ಪಿಯುಸಿಯಲ್ಲಿ ಹಾಗೂ ನೀಟ್ ಮತ್ತು ಜೆ.ಇ.ಇ ಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಕ್ರಮದ ಮಾಹಿತಿಯನ್ನು ಪ್ರಾಂಶುಪಾಲರು ವಿವರಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಗಳು ಹಲವು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.  ಕಾರ್ಯಕ್ರಮಕ್ಕೆ  ಉಪಾಧ್ಯಕ್ಷರಾದ ಕೋನಂಕಿ ತಿಲಕ್‍ಕುಮಾರ್, ಕಾಲೇಜು ಪ್ರಾಚಾರ್ಯರಾದ ಕೆ. ವೆಂಕಟೇಶ್ವರರಾವ್, ಉಪಪ್ರಾಚಾರ್ಯರಾದ ಜಿ. ಶ್ರೀನಿವಾಸರೆಡ್ಡಿ ಮತ್ತು ವಸತಿ ನಿಲಯದ ಮುಖ್ಯಸ್ಥರು, ಸಿಬ್ಬಂದಿವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.