ಡಿ.ಸಿ ಕಚೇರಿಯಲ್ಲಿ ಫ.ಗು ಹಳಕಟ್ಟಿ ಜನ್ಮದಿನಾಚರಣೆ
ಸಂಜೆವಾಣಿ ವಾರ್ತೆ
ಬೀದರ್: ಜು.2: ಜಿಲ್ಲಾಡಳಿತ ಬೀದರ. ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಡಾ.ಫ.ಗು ಹಳಕಟ್ಟಿಯವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕಿ ಸುರೇಖಾ ಅವರು ಡಾ. ಫ.ಗು ಹಳಕಟ್ಟಿಯವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಹೂ- ಮಾಲೆ ಹಾಕುವ ಮೂಲಕ ಅವರಿಗೆ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ. ವಾರ್ತಾಧಿಕಾರಿ ಜಿ. ಸುರೇಶ. ಜಿಲ್ಲಾಧಿಕಾರಿ ಕಛೇರಿ ಉಪ ತಹಶಿಲ್ದಾರ ಕಿರಣಕುಮಾರ ಸೇರಿದಂತೆ ಜಿಲ್ಲಾಧಿಕಾರಿಗಳ ಕಛೇರಿಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.