ಜನಸ್ಪಂದನ: ಅಹವಾಲು ಸ್ವೀಕಾರ
ಲಕ್ಷ್ಮೇಶ್ವರ, ಜು2: ತಾಲೂಕ ಪಂಚಾಯತಿಯ ಸಾಮರ್ಥ್ಯ ಸೌಧದಲ್ಲಿ ತಾಲೂಕ ಮಟ್ಟದ ಸಾರ್ವಜನಿಕರ ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ಜನಸ್ಪಂದನ ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ರೈತರ ಜಮೀನುಗಳಿಗೆ ಸಂಪರ್ಕಿಸುವ ರಸ್ತೆಗಳ ಸಮಸ್ಯೆ ಆಶ್ರಯ ಯೋಜನೆ ಹಕ್ಕು ಪತ್ರ ವಿತರಣೆ ಶೌಚಾಲಯ ಕುರಿ ಶೆಡ್ಡು ನಿರ್ಮಾಣ ಮೂಲಭೂತ ಸೌಕರ್ಯಗಳು ಬಸ್ಸಿನ ಸೌಕರ್ಯ ಮತ್ತು ಲಕ್ಷ್ಮೇಶ್ವರದ ಇಟ್ಟೀಕೆರೆ ಅಭಿವೃದ್ಧಿ ಶಿಗ್ಲಿ ಯಲ್ಲಿ ನಮ್ಮ ಹೊಲ ನಮ್ಮ ತೋಟ ಯೋಜನೆ ಅಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ರೈತರ ಜಮೀನುಗಳಲ್ಲಿ ಕಾಡುಪ್ರಾಣಿಗಳ ಉಪಟಳ ಸೇರಿದಂತೆ ನೂರಾರು ಸಮಸ್ಯೆಗಳ ಸರಮಾಲೆಯನ್ನು ಹೊತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರಮುಖವಾಗಿ ರೈತರು ಎದುರಿಸುತ್ತಿರುವ ರಸ್ತೆ ಸಮಸ್ಯೆಗಳು ಕುರಿತು ಜಿಲ್ಲಾಧಿಕಾರಿ ಎಂಎಲ್ ವೈಶಾಲಿ ಅವರು ನಕಾಶೆಯಲ್ಲಿ ರಸ್ತೆಗಳ ಗುರುತು ಇದ್ದರೆ ಅವುಗಳನ್ನು ಪೆÇಲೀಸ್ ಕಂದಾಯ ಮತ್ತು ಸರ್ವೆ ಇಲಾಖೆಗಳ ಸಹಯೋಗದಲ್ಲಿ ಸಮೀಕ್ಷೆ ಮಾಡಿ ರಸ್ತೆ ಗುರುತಿಸಲು ತಹಶೀಲ್ದಾರ ವಾಸುದೇವ್ ವಿ ಸ್ವಾಮಿಯವರಿಗೆ ಸೂಚಿಸಿದರು ಒಂದೊಮ್ಮೆ ನಕಾಶೆಯಲ್ಲಿ ರಸ್ತೆ ಇಲ್ಲದಿದ್ದರೆ ಅಕ್ಕಪಕ್ಕದ ರೈತರ ಮನವೊಲಿಸಿ ರಸ್ತೆಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದರು.
ಭಾರತೀಯ ಕಿಸಾನ್ ಸಂಘದ ಸದಸ್ಯರು ಈಗಾಗಲೇ ಬಿತ್ತಿ ಬೆಳೆದ ಬೆಳೆಗೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ಅವುಗಳನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು ಇದಕ್ಕೆ ಅರಣ್ಯ ಇಲಾಖೆಯವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಶಿಗ್ಲಿ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ನಮ್ಮ ಹೊಲ ನಮ್ಮ ತೋಟ ಯೋಜನೆ ಅಡಿ ಫಲಾನುಭವಿಗಳಿಗೆ ವಿತರಿಸಿರುವ ಜಮೀನುಗಳಿಗೆ ಇದುವರೆಗೂ ಪಟ್ಟ ವಿತರಣೆ ಮಾಡಿಲ್ಲ ಎಂದು ನೂರಾರು ಮಹಿಳೆಯರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು ಆಗ ಜಿಲ್ಲಾಧಿಕಾರಿಗಳು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ಅವರಿಗೆ ಕೂಡಲೇ ಇವುಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಲಕ್ಷ್ಮೇಶ್ವರ ಪಟ್ಟಣದ ಮೂಲಭೂತ ಸಮಸ್ಯೆಗಳ ಕುರಿತಾದ ಚರ್ಚೆಯಲ್ಲಿ ಶಾಸಕ ಡಾಕ್ಟರ್ ಚಂದ್ರು ಲಮಾಣಿ ಅವರು ಪಟ್ಟಣದಲ್ಲಿ ತಿಂಗಳಿಗೊಮ್ಮೆ ನೀರು ಸರಬರಾಜು ಆಗುತ್ತಿದೆ ಈ ಹಿಂದೆ ನದಿಯಲ್ಲಿ ನೀರು ಇರಲಿಲ್ಲ ಜನ ತಾಳ್ಮೆಯಿಂದಿದ್ದರೂ ಈಗ ಹೋಗಿ ತುಂಬಿ ಹರಿಯುತ್ತಿದ್ದು ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ ವಾಟರ್ ಮನ್ ಗಳು ಸಮರ್ಪಕ ಕಾರ್ಯನಿರ್ವಹಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳ ಸಮಕ್ಷಮ ಪುರಸಭೆಯ ವಿರುದ್ಧ ಹರಿ ಹಾಯ್ದರು.
ಇದಕ್ಕೆ ಜಿಲ್ಲಾಧಿಕಾರಿಗಳು ಪುರಸಭೆಯ ಮುಖ್ಯ ಅಧಿಕಾರಿ ಮಹೇಶ್ ಹಡ್ಪದವರಿಗೆ ಈ ಕೂಡಲೇ ಸಭೆ ಕರೆದು ವಾಟರ್ ಮ್ಯಾನ್ ಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಹೇಳಿದರು.
ಇಟ್ಟೀಕೆರೆ ಅಭಿವೃದ್ಧಿ ಕುರಿತು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಅನುದಾನ ಲಭ್ಯವಿದ್ದು ಕೂಡಲೇ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಆರ್ ಡಿ ಪಿ ಆರ್ ನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಮಾರುತಿ ನಾಯಕರಿಗೆ ಸೂಚಿಸಿದರು.
ಆಶ್ರಯ ಯೋಜನೆ ಕುರಿತಂತೆ ಶಾಸಕ ಚಂದ್ರು ಲಮಾಣಿ ಅವರು ಪ್ರತಿಕ್ರಿಯೆ ನೀಡಿ ಈಗಾಗಲೇ ಪುರಸಭೆ ವ್ಯಾಪ್ತಿಯಲ್ಲಿ 900ಕ್ಕೂ ಹೆಚ್ಚು ಮನೆಗಳು ಆ ಸೂಕ್ತ ಫಲಾನುಭವಿಗಳಿಗೆ ದೊರಕಿಲ್ಲ ಅವುಗಳ ಸರ್ವೆ ಕಾರ್ಯ ನಡೆದಿದ್ದು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಈ ಯೋಜನೆಯಲ್ಲಿ ಪರಿಶೀಲನೆ ನಡೆಸಿ ವಿತರಣೆ ಮಾಡಲು ಕ್ರಮ ಕೈಗೊಳ್ಳುವದಾಗಿ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಿಂದ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಇತರೆ ಕಟ್ಟಡ ಕಾರ್ಮಿಕರ ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ಟಾಪ್ಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಭರತ್ ಜಿಲ್ಲಾಧಿಕಾರಿ ಎಂಎಲ್ ವೈಶಾಲಿ ಶಾಸಕ ಡಾಕ್ಟರ್ ಚಂದ್ರು ಲಮಾಣಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ್ರ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ತಹಸಿಲ್ದಾರ್ ವಾಸುದೇವ್ ವಿ ಸ್ವಾಮಿ ಸೇರಿದಂತೆ ಅನೇಕರಿದ್ದರು ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಜನಸ್ಪಂದನದಲ್ಲಿ ಭಾಗವಹಿಸಿದ್ದರು.