ಡಾ.ಶರಣಬಸಪ್ಪ ಕ್ಯಾತ್ನಾಳ್ ಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಪ್ರಶಸ್ತಿ ಪ್ರಶಸ್ತಿ ಪ್ರಧಾನ
ಕಲಬುರ್ಗಿ,ಜು,02: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ 1 ರಂದು ಕೊಡ ಮಾಡುವ “ಶ್ರೇಷ್ಠ ವೈದ್ಯ ಪ್ರಶಸ್ತಿ” ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರು ಕಲಬುರಗಿ ಆರ್ ಸಿ ಎಚ್ ಜಿಲ್ಲಾ ಅಧಿಕಾರಿಗಳಾದ ಡಾ. ಶರಣಬಸಪ್ಪ ಕ್ಯಾತ್ನಾಳ್ ಸಂಘಟನಾ ಕಾರ್ಯದರ್ಶಿ ರವರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಗಾಗಿ 2023ನೇ ಸಾಲಿನ ಪ್ರಶಸ್ತಿಯನ್ನು ಆರೋಗ್ಯ ಸೌಧದಲ್ಲಿ ನೀಡಿ ಗೌರವಿಸಿದರು.
ನಿತ್ಯಸೇವೆ ಅರಿತು ಪ್ರಶಸ್ತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಕೃತಜ್ಞತೆಗಳು.
ಡಾ. ಶರಣಬಸಪ್ಪ ಕ್ಯಾತ್ನಾಳ್ ಆರ್ ಸಿ ಎಚ್ ಜಿಲ್ಲಾ ಅಧಿಕಾರಿಗಳು ಕಲಬುರಗಿ