ನಾಳೆ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನೆ
ಸಂಜೆವಾಣಿ ವಾರ್ತೆ
ಶಿವಮೊಗ್ಗ ಜು.೨; ಶಿವಮೊಗ್ಗ ನಗರಕ್ಕೆ ಸಮೀಪದ ಹರಕೆರೆ ಗ್ರಾಮದ ಶಂಕರ ಕಣ್ಣಿನ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭ ಜುಲೈ 3ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಜ್ಯೋತಿಪ್ರಕಾಶ ಇಂದು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.ಜುಲೈ 3 ರ ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡವನ್ನು ಉದ್ಘಾಟಿಸುವರು. ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಜ್ಯೋತಿ ಪ್ರಜ್ವಲನದ ಮೂಲಕ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ(ರಿ)ಯ ಗೌರವಾಧ್ಯಕ್ಷರಾದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು. ಅಧ್ಯಕ್ಷರಾದ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ|| ಧನಂಜಯ ಸರ್ಜಿ ಹಾಗೂ ಡಿ.ಎಸ್.ಅರುಣ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಹೆಚ್.ಎಂ.ಚAದ್ರಶೇಖರಪ್ಪ, ಆಯನೂರು ಮಂಜುನಾಥ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಶ್ರೀ ಬ.ವೀ.ಲಿಂ.ಸೇವಾ ಸಮಾಜದ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್, ಅ.ಭಾ.ವೀ.ಲಿಂ.ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎಸ್.ಸಜ್ಜನ, ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ ಸಿ., ನಿರ್ಮಿತಿ ಕೇಂದ್ರದ ಯೋಜನ ವ್ಯವಸ್ಥಾಪಕ ನಾಗರಾಜ್ ಕೆ., ಶ್ರೀಮತಿ ಪಾರ್ವತಮ್ಮ ಪಂಚಾಕ್ಷರಯ್ಯ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ, ವೀರಶೈವ ಸಮಾಜದ ಧುರೀಣ ಎನ್.ಜೆ.ರಾಜಶೇಖರ್, ಹೆಚ್.ವಿ.ಮರುಳೇಶ ಭಾಗವಹಿಸುವರು. ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿಯ ಎಲ್ಲ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿರುವರು.