ನೀಟ್ ಪರೀಕ್ಷೆ ಅಕ್ರಮ ಸಮಗ್ರ ತನಿಖೆಗೆ ಆಗ್ರಹ
ಸಂಜೆವಾಣಿ ವಾರ್ತೆ
ದಾವಣಗೆರೆ.ಜು.೧: ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿ ಬರುತ್ತಿದ್ದು ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿ ಸೂಕ್ತ ತನಿಖೆ ನಡೆಸಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಗಿರು ವಂತಹ ಅನ್ಯಾಯ ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.ಈ ಬಾರಿ ನೀಟ್ ಪರೀಕ್ಷೆ ಬರೆದಿರುವ 67 ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿದ್ದಾರೆ. ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರದಿರುವಂತಹ  ಆರು ವಿದ್ಯಾರ್ಥಿಗಳು ಟಾಪರ್ ಆಗಿರುವುದು ಪರೀಕ್ಷೆಯಲ್ಲಿ ಅಕ್ರಮ ಆಗಿದೆ ಎಂಬ ಅನು ಮಾನಕ್ಕೆ ಹೆಚ್ಚು ಪುಷ್ಟಿ ನೀಡುವಂತಿದೆ. ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ಆರೋಪ ಸಹ ವಿದ್ಯಾರ್ಥಿ ವಲಯದಲ್ಲಿ ಕೇಳಿ ಬರುತ್ತಿದೆ. ಈ ಎಲ್ಲ ಕಾರಣಗಳಿಂದ ನೀಟ್ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಅದಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯ ಆಗಲಿದೆ ಅವರ ಭವಿಷ್ಯವೇ ನಾಶ ಆಗಲಿದೆ.‌ ರಾಜ್ಯ ಸರ್ಕಾರ ಅನ್ಯಾಯ ಮತ್ತು ಮೋಸದ ಬಗ್ಗೆ ಗಮನಹರಿಸಿ ನ್ಯಾಯ ಒದಗಿಸಲು ಮುಂದಾಗಬೇಕು. ರಾಜ್ಯ ಸರ್ಕಾರದ ಕ್ರಮದ ನೋಡಿಕೊಂಡು ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನಕ್ಕೆ ಅನ್ವಯವಾಗುವಂತೆ ಹೋರಾಟ ಇತರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿಪಕ್ಷದ ಉಪಾಧ್ಯಕ್ಷೆ ಬಿ.ಬಿ. ಸಪೂರ, ಫರ್ ಕುಂದ, ಮೊಹಮ್ಮದ್ ಇರ್ಫಾನ್ ರಜವಿ, ಇಸೂಫ್ ಅಲಿಖಾನ್, ವಸೀಂ ಇತರರು ಇದ್ದರು.