ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಪ್ರಸ್ತಾಪ ಸಲ್ಲದು; ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆಗೆ ಖಂಡನೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಜು.೧: ಅಹಿಂದ ವರ್ಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳಲಿದ್ದು, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಬಸವರಾಜ್ ಅವರು ರಾಜೀನಾಮೆ ನೀಡಿ, ಧೈರ್ಯವಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಿ ಗೆಲ್ಲಲಿ ಎಂದು ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸಿ.ಹೆಚ್. ಪರಶುರಾಮಪ್ಪ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಸ್ವಾತಂತ್ರ್ಯದ ನಂತರ 76 ವರ್ಷಗಳಿಂದ ಅಲ್ಪಸಂಖ್ಯಾತ ಹಿಂದುಳಿದ ದಲಿತ ವರ್ಗಗಗಳನ್ನು ಪ್ರತಿನಿಧಿಸುವವರು ಎಷ್ಟು ಜನ ಮುಖ್ಯಮಂತ್ರಿಗಳಾಗಿದ್ದಾರೆ. ಎರಡು ವರ್ಷಗಳು ಎಸ್. ಬಂಗಾರಪ್ಪನವರು, ಎರಡು ವರ್ಷಗಳು ವೀರಪ್ಪ ಮೊಯಿಲಿಯವರು. ಐದು ವರ್ಷಗಳು ಯಶಸ್ವಿಯಾಗಿ ಮುಖ್ಯಮಂತ್ರಿಯಾಗಿ 2023 ರಲ್ಲಿ ಮತ್ತೊಮ್ಮೆ ಅಹಿಂದ ವರ್ಗಗಳ ಬೆಂಬಲದೊಂದಿಗೆ 136 ಸ್ಥಾನಗಳನ್ನು ಗಳಿಸಿ, ಮತ್ತೊಮ್ಮೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಸರಾಸರಿ ಶೇ. 80  ರಷ್ಟಿರುವ ಅಹಿಂದ ವರ್ಗಗಳು ಓಟ್ ಬ್ಯಾಂಕನ್ನಾಗಿಸಿಕೊಂಡಿರುವ ರಾಜಕೀಯ ಪಕ್ಷಗಳು ಶೇ. 20 ರಷ್ಟಿರುವ ಸಮುದಾಯಗಳು ರಾಜ್ಯ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದಾರೆ. 2023 ರಲ್ಲಿ ಮತ್ತೊಮ್ಮೆ ಅವಕಾಶ ಸಿದ್ದರಾಮಯ್ಯನವರಿಗೆ ಸಿಕ್ಕಿದೆ. ಮುಖ್ಯಮಂತ್ರಿಯಾಗಿ ಮುಂದುವರೆಯಲು ಅವಕಾಶ ನೀಡಬೇಕಾದವರು ಸರ್ಕಾರಿ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಬಹಿರಂಗವಾ ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಒತ್ತಾಯ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಅನ್ನಿಸುತ್ತದೆ ಎಂದರು.