ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಶಾಸಕ ಡಾ. ಸಿದ್ದಲಿಂಗಪ್ಪಾ ಪಾಟೀಲ ಚಾಲನೆ
ಸಂಜೆವಾಣಿ ವಾರ್ತೆ
ಹುಮನಾಬಾದ:ಸೆ.೨೭: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ಅಕ್ಷರ ದಾಸೋಹದ, ಮಧ್ಯಾಹ್ನ ಉಪಹಾರ ಯೋಜನೆ ಅಡಿ ಅಜಿಂ ಪ್ರೇಮ ಜಿ ಪೌಂಡೇಶನ್ ಸಹಭಾಗಿತ್ವದಲ್ಲಿ ೨೦೨೪, ೨೫ ಸಾಲಿನ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ವಾರದಲ್ಲಿ ೬ ದಿನಗಳಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ಕೆ ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರ ಅಕ್ಷರ ದಾಸೋಹದ, ಮಧ್ಯಾಹ್ನ ಉಪಹಾರ ಯೋಜನೆ ಅಡಿ ಅಜಿಂ ಪ್ರೇಮ ಜಿ ಪೌಂಡೇಶನ್‌ನಿAದ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ವಾರದಲ್ಲಿ ೬ ದಿನಗಳಲ್ಲಿ ಬಾಳೆ ಹಣ್ಣು, ಮೊಟ್ಟೆ, ಮತ್ತು ಚಕ್ಕೆಯನ್ನು ಕೊಡುವ ಪೂರಕ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಮಹಾವೀರ ಜಮಖಂಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕ ಅಧ್ಯಕ್ಷ ನಾಗಶೆಟ್ಟಿ ಡುಮಣ , ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರರೆಡ್ಡಿ ಮಾಲಿ ಪಾಟೀಲ, ಬಿಆರ್‌ಸಿ ಪ್ರೀತಮ್‌ಸಿಂಗ ಜಾಧವ, ದೈಹಿಕ ಶಿಕ್ಷಣಾಧಿಕಾರಿ ಕಾಶಿನಾಥ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಟೇಲ್, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮುರುಗೇಂದ್ರ ಸಜ್ಜನಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಸೂರ್ಯಕಾಂತ ಹಾವಶೆಟ್ಟಿ, ಅಶೋಕ ಮಹೇಂದ್ರಕರ್, ರಾಜಪ್ಪಾ ಜಮಾದಾರ್, ರಾಜಕುಮಾರ ಬೇಲೂರೆ, ಪರಮೇಶ್ವರ ಬೇನಚಿಂಚೋಳಿ, ಅಕ್ಷರ ದಾಸೋಹ ಯೋಜನೆ ಸಿಬ್ಬಂದಿ ಪ್ರಕಾಶ ಮಳ್ಳಿ, ಇದ್ದರು.