ರಾಘವೇಂದ್ರಗೆ ಪ್ರತಿಭಾ ಪುರಸ್ಕಾರ
ಸಂಜೆವಾಣಿ ವಾರ್ತೆ,
ವಿಜಯಪುರ,ಜು.1 :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿದ್ದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾವೇರಿಯ ಕಲ್ಯಾಣಮಂಟಪದಲ್ಲಿ ಭಾನುವಾರ ಜರುಗಿತು.
ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿ ವಿಜಯಪುರದ ಕುಮಾರ ರಾಘವೇಂದ್ರ ದತ್ತಾತ್ರೇಯ ಹಿಪ್ಪರಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.91.06ರಷ್ಟು ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಮಕ್ಕಳಿಗಾಗಿ ಕೊಡುವ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು,
ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಎಪಿಎಂಸಿ, ಸಕ್ಕರೆ ಮತ್ತು ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವÀ ಶಿವಾನಂದ ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಸದ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಉಪಸಭಾಪತಿ ರುದ್ರಪ್ಪ ಲಮಾಣಿ, ಮಾಧ್ಯಮ ಸಲಹೆಗಾರÀ ಕೆ.ವಿ. ಪ್ರಭಾಕರ, ಮುಖ್ಯಸಚೇತಕ ಸಲೀಂ ಅಹಮದ, ವಿದ್ಯಾರ್ಥಿಯ ತಾಯಿ ಮಂಜುಳಾ ದತ್ತಾತ್ರೇಯ ಹಿಪ್ಪರಗಿ ಮತ್ತಿತರರು ಉಪಸ್ಥಿತರಿದ್ದರು.