ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ (Bengaluru) 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು – ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ 2 ವರ್ಷಗಳ ಬಳಿಕ ಭಾರೀ ವಾಹನಗಳ (Heavy Vehicles) ಸಂಚಾರಕ್ಕೆ ಮುಕ್ತವಾಗ್ತಿದೆ.ಇದೇ ಜುಲೈ 29ರ ಸೋಮವಾರದಿಂದ ಪೀಣ್ಯ ಫ್ಲೈಓವರ್‌ ಮೇಲೆ ಬಸ್, ಲಾರಿ, ಟ್ರಕ್ ಸೇರಿದಂತೆ ಭಾರೀ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಅವಾಯ್ಡ್ ಮಾಡಿದ್ದಕ್ಕೆ ಸ್ನೇಹಿತೆಯ ಕೊಲೆ – ಕೋರಮಂಗಲ ಪಿಜಿ ಯುವತಿ ಮರ್ಡರ್ ಕೇಸ್‌ಗೆ ಟ್ವಿಸ್ಟ್‌!ಈ ಹಿಂದೆ ಫ್ಲೈಓವರ್‌ನ (Peenya flyover) 2 ಪಿಲ್ಲರ್‌ಗಳಲ್ಲಿ ದೋಷ ಕಂಡು ಬಂದಿದ್ದರಿಂದ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿ ಲಘು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿತ್ತು. 2 ಪಿಲ್ಲರ್‌ಗಳಿಂದಾಗಿ 120 ಪಿಲ್ಲರ್‌ಗಳ 240 ಕೇಬಲ್ ಅಳವಡಿಕೆ ಪರಿಶೀಲಿಸಿ, ಲೋಡ್ ಟೆಸ್ಟಿಂಗ್ ಎಲ್ಲಾ ಆದ ಬಳಿಕ ಸಂಚಾರಕ್ಕೆ ಅವಕಾಶ ನೀಡಬಹುದು ಅಂತ ತಜ್ಞರು ಹೆದ್ದಾರಿ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದರು. ತಜ್ಞರ ಅಭಿಪ್ರಾಯವನ್ನು ಪ್ರಾಧಿಕಾರ ಪೊಲೀಸರಿಗೆ ಸಲ್ಲಿಕೆ ಮಾಡಿತ್ತು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ; ಉಭಯ ಸದನಗಳಲ್ಲಿ ತೀರ್ಮಾನಇದೀಗ ಪ್ರತಿ ಶುಕ್ರವಾರ ಹೊರತುಪಡಿಸಿ ಉಳಿದ 6 ದಿನಗಳ ಕಾಲ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಶುಕ್ರವಾರ ಫ್ಲೈಓವರ್‌ನ ನಿರ್ವಹಣೆ, ಪರಿಶೀಲನೆ ಆಗಲಿದ್ದು, ಆ ದಿನ ಮಾತ್ರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರಲಿದೆ. ಉಳಿದ 6 ದಿನವೂ ಸಂಚಾರಕ್ಕೆ ಅವಕಾಶ ಕೊಟ್ಟು ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರSign in to your account
Username or Email Address


Password

 Remember Me


