ಧಾರವಾಡ: ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಮತ್ತು ತಂಪು ಗಾಳಿ ಬೀಸುತ್ತಿರುವುದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ (Dharwad DC) ದಿವ್ಯ ಪ್ರಭು (Divya Prabhu) ಆದೇಶಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯ ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.  ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ Sign in to your account
Username or Email Address


Password

 Remember Me


