ಬೆಂಗಳೂರು: ಅಂಕೋಲ ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಸೇನೆ (Army) ಕರೆದುಕೊಂಡು ಬರಬೇಕಿತ್ತು ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಹೆಚ್‌ಡಿಕೆ ಮತ್ತೆ ಕಿಡಿಕಾರಿದ್ದಾರೆ. ಡಿಕೆ ಶಿವಕುಮಾರ್ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆ ಮೂಲಕ ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದರು. ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು. ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ ಎಂದರು. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರ ಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ತಮಿಳುನಾಡಿಗೆ ನಾವು ನೀರು ಬಿಟ್ಟಿಲ್ಲ: ಡಿಕೆಶಿನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ. ಇಷ್ಟು ಸರಳ ಸಾಮರಸ್ಯ ತತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ. ನಮ್ಮ ಸೇನೆ ನಮ್ಮ ಹೆಮ್ಮೆ ಎಂದು ಹರಿಹಾಯ್ದರು. ಇದನ್ನೂ ಓದಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭ – ನಾಳೆ ಕೇಂದ್ರ ಬಜೆಟ್‌ ಮಂಡನೆ






 Advertisement 




Sign in to your account
Username or Email Address


Password

 Remember Me


