– ನಾನು ರಾಜ್ಯಕ್ಕೆ ಬರುವುದನ್ನು ಸರ್ಕಾರಕ್ಕೆ ಸಹಿಸಲಾಗುತ್ತಿಲ್ಲಹಾಸನ: ನಾನು ರಾಜ್ಯದ ಸಂಸದನಾಗಿ, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಜ್ಯ ಸರ್ಕಾರ ನನಗೆ ಹೆಜ್ಜೆಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.ಸಕಲೇಶಪುರದಲ್ಲಿ ಮಳೆಹಾನಿ ಪ್ರದೇಶಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರೊಂದಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಸಹಕಾರ ಕೇಳುವ ರಾಜ್ಯ ಸರ್ಕಾರ ಒಬ್ಬ ಕೇಂದ್ರ ಸಚಿವ ರಾಜ್ಯಕ್ಕೆ ಬರುವುದನ್ನು ಸಹಿಸುತ್ತಿಲ್ಲ. ಶನಿವಾರ ಉತ್ತರ ಕನ್ನಡ ಜಿಲ್ಲೆಯ ಶಿಶೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ನಾನು ಭೇಟಿ ನೀಡಿದಾಗ ಐದು ಕಿ.ಮೀ. ಹಿಂದೆಯೇ ಬ್ಯಾರಿಕೇಡ್‌ಗಳನ್ನು ಹಾಕಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ನಾನು ಮಳೆಹಾನಿ ಸಮೀಕ್ಷೆ ನಡೆಸಿದ್ದನ್ನು ವರದಿ ಮಾಡಬಾರದು ಎಂದು ಈ ರೀತಿ ನಿರ್ಬಂಧ ಹೇರಿದ್ದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸಲ್ಲ ಎಂದರೆ ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಇವರು? ನಾನು ಬರಲೇಬಾರದು ಎನ್ನುವ ರೀತಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಮಂಡ್ಯಕ್ಕೆ ಹೋದರೂ ಬೇಡ ಎನ್ನುತ್ತಾರೆ, ಉತ್ತರ ಕನ್ನಡ ಜಿಲ್ಲೆಗೆ ಹೋದರೂ ಎಂದರೆ ಅಲ್ಲಿಗೂ ಬೇಡ ಎನ್ನುತ್ತಾರೆ. ಸದ್ಯ ಹಾಸನಕ್ಕೆ ಬರಬೇಡಿ ಎನ್ನಲಿಲ್ಲ. ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದರೆ ಇವರಿಗೆ ಕೈಕಾಲು ನಡುಗುತ್ತದೆ ಎಂದು ಕುಟುಕಿದ್ದಾರೆ.ಯಾವ ಸರ್ಕಾರವೂ 10 ಲಕ್ಷ ರೂ. ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂದು ಸಚಿವ ಮಂಕಾಳ ವೈದ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರಿಗೆ ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಎಂಬ ಮಾಹಿತಿ ಇದ್ದಂತೆ ಇಲ್ಲ. ಅವರಿಗೆ ಸಮಯ ಸಿಕ್ಕಿದರೆ ಕೊಡುಗು ಜಿಲ್ಲೆಗೆ ಭೇಟಿ ನೀಡಲಿ. 2018ರಲ್ಲಿ ನಾನು ಸಿಎಂ ಆಗಿದ್ದಾಗ ಅಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾದಾಗ ಅನೇಕರು ಮನೆಮಠ ಆಸ್ತಿಗಳನ್ನು ಕಳೆದು ನಿರಾಶ್ರಿತರಾಗಿದ್ದರು. ಕೆಲವೇ ತಿಂಗಳಲ್ಲಿ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ಕಟ್ಟಿಕೊಡಲಾಯಿತು. ಅಲ್ಲದೇ ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ. ಆಹಾರ ಪದಾರ್ಥ ಕೊಳ್ಳಲು 50,000 ರೂ. ಕೊಟ್ಟಿದ್ದೇವೆ. ಬಹುಶಃ ಸಚಿವರಿಗೆ ಇದೆಲ್ಲಾ ಗೊತ್ತಿಲ್ಲದೆ ಇರಬಹುದು. ದಯಮಾಡಿ ಅವರು ಬಿಡುವು ಮಾಡಿಕೊಂಡು ಹೋಗಿ ಕೊಡಗಿನಲ್ಲಿ ಪರಿಸ್ಥಿತಿಯನ್ನು ಅವಲೋಕನ ಮಾಡಲಿ ಎಂದು ತಿರುಗೇಟು ಕೊಟ್ಟಿದ್ದಾರೆ.ಮಳೆಹಾನಿ ಪ್ರದೇಶಗಳಿಗೆ ನಾನು, ಅಶೋಕ್ ಒಟ್ಟಿಗೆ ಭೇಟಿ ನೀಡಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದ್ದಾರೆ. ನಿನ್ನೆ ದಿನ ಶಿಶೂರು ಗುಡ್ಡದಲ್ಲಿ ಐದು ಕಿಲೋಮೀಟರ್ ದೂರದಲ್ಲಿ ಮಾಧ್ಯಮಗಳಿಗೆ ತಡೆಗೋಡೆ ಇಟ್ಟು ಏನು ಚಿತ್ರೀಕರಣ ಮಾಡದ ರೀತಿ ಆದೇಶ ಮಾಡಿದ್ದರು. ನಾನು ಯಾರನ್ನೂ ಟೀಕೆ ಮಾಡಲು ಹೋಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಬಹುಶಃ ರಾಜ್ಯದ ಸರ್ಕಾರದಲ್ಲಿ ಕೆಲಸ ಮಾಡುತ್ತಿರುವ ಕೆಲ ಸಚಿವರಿಗೆ ಇಂಥಹ ವಿವೇಕ ಇದ್ದಂತೆ ಇಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.ಡಿಕೆಶಿಗೆ ತಿರುಗೇಟು
ಮಳೆ, ನೆರೆ ಪರಿಹಾರ ಕಾರ್ಯಕ್ಕೆ ಸೇನೆಯನ್ನು ಕರೆದುಕೊಂಡು ಬರಬೇಕಿತ್ತು ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಚಾರವಾಗಿ, ಅವರು ಯಾವ ಅರ್ಥದಲ್ಲಿ ಸೇನೆಯನ್ನು ಕರೆಸಬೇಕು ಎಂದು ಹೇಳಿದ್ದಾರೋ ಗೊತ್ತಿಲ್ಲ. ಪಾಪ. ಅವರು ಮಿಲಿಟರಿಯನ್ನು ಏಕೆ ತರಲು ಹೇಳಿದ್ದಾರೆ ಎಂದರೆ ಈ ರಾಜ್ಯದಲ್ಲಿ ಅವ್ಯಾಹತವಾಗಿ ಲೂಟಿ, ದರೋಡೆ ನಡೆಯುತ್ತಿದೆ. ಭಯೋತ್ಪಾದಕ ಕೃತ್ಯಗಳಿಗಿಂತ ದರೋಡೆ, ಲೂಟಿ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಿಲು ಮಿಲಿಟರಿಯನ್ನು ಕರೆ ತರಲು ಹೇಳಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ನಾನು ಖಿನ್ನತೆಯಲ್ಲಿ ಇದ್ದೀನಿ ಎಂದು ಅವರು ಹೇಳಿದ್ದಾರೆ. ನನ್ನನ್ನು ನೋಡಿದರೆ ಆ ರೀತಿ ಇರುವವನಂತೆ ಕಾಣುತ್ತೇನೆಯೇ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.‌ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌, ಸಿಮೆಂಟ್‌ ಮಂಜುನಾಥ್‌, ಹೆಚ್.ಕೆ.ಸುರೇಶ್‌ ಮೊದಲಾದವರು ಹಾಜರಿದ್ದರು.Sign in to your account
Username or Email Address


Password

 Remember Me


