-ನಮ್ಮ ಪ್ರಶ್ನೆಗಳಿಗೆ ಸಿಎಂ ಉತ್ತರ ಕೊಡಲಿಲ್ಲಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು (Valmiki Corporation Scam) ಈ ಸರ್ಕಾರದ ಒಬ್ಬ ಸಚಿವ, ಒಬ್ಬ ಶಾಸಕ, ಮುಖ್ಯಮಂತ್ರಿ ಸೇರಿ ಹಲವಾರು ಸಚಿವರು ಲೂಟಿ ಮಾಡಿ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಅದು ಇ.ಡಿ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಅವರು, ಲೂಟಿ ಆದ ಹಣ ಎಲ್ಲೆಲ್ಲಿ ಹೋಗಿದೆ? ಯಾವಾಗ ವಾಪಸ್ ತರುತ್ತೀರಿ ಎಂದು ನಾವು ನಿಲುವಳಿ ಸೂಚನೆ ಮೂಲಕ ಪ್ರಶ್ನಿಸಿದ್ದೇವೆ. ಅಲ್ಲದೇ ಎಫ್‍ಐಆರ್‌ನಲ್ಲಿ ನಾಗೇಂದ್ರ, ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ಹೆಸರಿಲ್ಲ. ಒತ್ತಡ ಹಾಕಿ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ಮುಖ್ಯಮಂತ್ರಿ ವೀರಾವೇಶದ ಮಾತನಾಡಿ ತಮ್ಮ ಸರ್ಕಾರ ಭಾಗಿಯಾಗಿಲ್ಲ ಎಂದಿದ್ದಾರೆ. ಹಾಗಿದ್ದರೆ ಸಚಿವರು ರಾಜೀನಾಮೆ ಕೊಟ್ಟಿದ್ದು ಯಾಕೆ? ಬುದ್ಧಿ ಇಲ್ಲದೇ ರಾಜೀನಾಮೆ ಕೊಟ್ಟರೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!89 ಕೋಟಿ ರೂ. ಲೂಟಿ ಆಗಿದೆ ಎಂದು ನೀವೇ ಒಪ್ಪಿಕೊಂಡಿದ್ದೀರಿ. ಆತ್ಮಹತ್ಯೆ ಹಾಗೂ ಲೂಟಿಯ ತನಿಖೆ ಮಾಡುವುದನ್ನು ಬಿಟ್ಟು ನಿಮ್ಮ ಸರ್ಕಾರದಲ್ಲಿ ಹೀಗಾಗಿತ್ತು, ಹಾಗಾಗಿತ್ತು ಎಂದು ಹೇಳಿದ್ದು ಸರಿಯೇ? 40% ಸರ್ಕಾರ ಎಂದು ನಮ್ಮ ವಿರುದ್ಧ ಪೋಸ್ಟರ್ ಅಂಟಿಸಿದ್ದೀರಲ್ಲವೇ? 14 ತಿಂಗಳಾದರೂ 40% ಸರ್ಕಾರ ಎಂಬ ವಿಷಯದಲ್ಲಿ ಫಲಿತಾಂಶ ಬಂದಿದೆಯೇ? ಅದೆಲ್ಲ ಬೋಗಸ್ ಎಂದು ಅವರು ಹೇಳಿದ್ದಾರೆ.ದಲಿತನ ಸಾವಿಗೆ ನ್ಯಾಯ ಸಿಗಬೇಕು. ಲೂಟಿಯಾದ ಹಣ ಮರಳಿ ಅವರಿಗೆ ಸಿಗಬೇಕು. ಈ ಸರ್ಕಾರದಲ್ಲಿ ಅಪರಾಧಿಗಳು ಯಾರಿದ್ದಾರೋ ಅವರಿಗೆ ಶಿಕ್ಷೆ ಆಗಬೇಕು. ಆದರೆ ನಮ್ಮ ಬೇಡಿಕೆಗಳಿಗೆ ಎಳ್ಳು ನೀರು ಬಿಟ್ಟಂತೆ ಸಿಎಂ ಮಾತನಾಡಿದ್ದಾರೆ ಎಂದು ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.ಸದನ ಇವತ್ತು ನಡೆದಿದ್ದೇ ಸರಿಯಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಸದನ ನಡೆದಿರುವುದು ಒಂದು ಕಪ್ಪು ಚುಕ್ಕಿ. ಸದನ ನಡೆಸಲು ಸ್ಪೀಕರ್ ಅವರಿಗೆ ಆಗಲೇ ಇಲ್ಲ. ಸ್ಪೀಕರ್ ಅವರು ಸದನ ನಡೆಸುವಲ್ಲಿ ವಿಫಲರಾಗಿದ್ದಾರೆ. ಮೂಕ ಪ್ರೇಕ್ಷಕರಂತೆ ಅವರು ಕುಳಿತಿದ್ದರು. ಇಂಥ ಸ್ಪೀಕರ್ ಅವರಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಾಗದು. ಅವಮಾನಕರ ರೀತಿಯಲ್ಲಿ ಸದನ ನಡೆಸಿದ್ದಾರೆ. ಸ್ಪೀಕರ್ ಅವರ ನಡೆ ಸದನಕ್ಕೆ ಗೌರವ ತರುವಂತೆ ಇರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಎಂ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ: ವಿಜಯೇಂದ್ರSign in to your account
Username or Email Address


Password

 Remember Me


