ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.ದರ್ಶನ್ ಮತ್ತು ಗ್ಯಾಂಗ್‌ಗೆ ಈಗಾಗಲೇ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪವಿತ್ರಾ ಗೌಡರನ್ನು ಮಾತ್ರ ಪ್ರತ್ಯೇಕವಾದ ಕೊಠಡಿಯಲ್ಲಿ ಹಾಜರುಪಡಿಸಲಾಗಿತ್ತು. ಆರೋಪಿಗಳಿಗೆ ಆ.1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ದರ್ಶನ್‌ಗೆ ಜೈಲೂಟದಿಂದ ಇಂದು ಮುಕ್ತಿ ಸಿಗುತ್ತಾ? – ಹೈಕೋರ್ಟ್‌ನಲ್ಲಿ ಭವಿಷ್ಯಜೂ.11 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಬಂಧನ ಮಾಡಲಾಗಿತ್ತು. ಇದುವರೆಗೂ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ. ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಆಗಲಿ ಎಂದು ವಕೀಲರು ಕಾಯುತ್ತಿರುವ ಸಾಧ್ಯತೆ ಇದೆ. ಕೊಲೆ ಪ್ರಕರಣ ಸಂಬಂಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲು ಪೊಲೀಸರಿಗೆ 90 ದಿನಗಳ ಕಾಲಾವಕಾಶ ಇದೆ. ಚಾರ್ಜ್ಶೀಟ್ ಸಲ್ಲಿಕೆ ಆಗುವವರೆಗೂ ದರ್ಶನ್ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನವೇ ಗಟ್ಟಿಯಾಗಿದೆ.ಒಂದು ವೇಳೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಲ್ಲಿ ಚಾರ್ಜ್ಶೀಟ್‌ಗೂ ಮುನ್ನ ಕೊಲೆ ಕೇಸ್‌ನಲ್ಲಿ ಜಾಮೀನು ಸಿಗುವುದು ಅನುಮಾನ. ಹೀಗಾಗಿ ಚಾರ್ಜ್ಶೀಟ್ ಸಲ್ಲಿಕೆ ವೇಳೆಗೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌!ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 13, ತುಮಕೂರು ಜೈಲಿನಲ್ಲಿ 4 ಆರೋಪಿಗಳು ಇದ್ದಾರೆ.Sign in to your account
Username or Email Address


Password

 Remember Me


